
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಪೊಲೀಸ್ ಮತ್ತು ಸೇನಾಪಡೆಯಿಂದ ಗೌರವ ವಂದನೆ ಸ್ವೀಕರಿಸಿದರು, ತೆರೆದ ಜೀಪ್‌ನಲ್ಲಿ ಪರೇಡ್ ವೀಕ್ಷಣೆ ಮಾಡಿದರು.

77ನೇ ಗಣರಾಜ್ಯೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಸಂದೇಶ ನೀಡಿ, ಸಂವಿಧಾನ ರಕ್ಷಣೆ ಅಗತ್ಯ, ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣ ಹಾಗೂ ಶಕ್ತಿಶಾಲಿ ರಾಜ್ಯಕ್ಕಾಗಿ ಜನರ ಸಹಕಾರ ಕೋರಿದರು.

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 1,400 ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, 1,100 ಮಂದಿಯ ಕವಾಯತು, ತಮಿಳುನಾಡು ಪೊಲೀಸರ ಭಾಗವಹಿಸಸಿದರು.

ಕಾರ್ಯಕ್ರಮಕ್ಕೆ 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, 100ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ, ಬೆಳಗ್ಗೆ 8.30ರಿಂದ 10.30ರವರೆಗೆ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಜಾರಿ ಮಾಡಲಾಗಿದೆ.

ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಪರಿವರ್ತನ ಬೇಕರಿಯಲ್ಲಿ ಖೈದಿಗಳು ತಯಾರಿಸಿದ ಸಿಹಿಗಳನ್ನು ವಿತರಿಸಲಾಯಿತು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು.