AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 Years of Modi Government: ಪ್ರಧಾನಿ ಮೋದಿ ಅವರ ಮಹತ್ವ ಯೋಜನೆಗಳು ಇಲ್ಲಿವೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಮಹತ್ವಾಕಾಂಕ್ಷೆ ಯೋಜನೆಗಳು ಇಲ್ಲಿವೆ.

TV9 Web
| Updated By: ವಿವೇಕ ಬಿರಾದಾರ

Updated on:May 26, 2022 | 3:43 PM

2ನೇ ಅಕ್ಟೋಬರ್ 2014 ರಂದು ಪ್ರಧಾನಿ ಮೋದಿ ಅವರು ಸ್ವಚ್ಛ ಭಾರತ್ ಮಿಷನ್ ಅನ್ನು ಪ್ರಾರಂಭಿಸಿದರು. ಈ ಮಿಷನ್ ಅಡಿಯಲ್ಲಿ, ಭಾರತದ ಎಲ್ಲಾ ಗ್ರಾಮಗಳು, ಗ್ರಾಮ ಪಂಚಾಯತ್‌ಗಳು, ಜಿಲ್ಲೆಗಳು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 2019 ರ ಅಕ್ಟೋಬರ್ 2 ರೊಳಗೆ ಮಹಾತ್ಮ ಗಾಂಧಿಯವರ 150 ನೇ ಜನ್ಮದಿನದ ವೇಳೆಗೆ 100 ಮಿಲಿಯನ್ ಶೌಚಾಲಯಗಳನ್ನು ನಿರ್ಮಿಸುವ ಮೂಲಕ "ಬಯಲು-ಮಲವಿಸರ್ಜನೆ ಮುಕ್ತ ಭಾರತ" ಎಂದು ಘೋಷಿಸಿದ್ದರು.

8 Years of Modi Government: look at key pro-people schemes - In pics

1 / 8
ಜಲ ಜೀವನ್ ಮಿಷನ್ ಮುಖಾಂತರ 2024 ರ ವೇಳೆಗೆ ಗ್ರಾಮೀಣ ಭಾರತದ ಎಲ್ಲಾ ಮನೆಗಳಿಗೆ ಕುಡಿಯುವ ನಲ್ಲಿ ನೀರು ಸಂಪರ್ಕ ನೀಡುವ ಗುರಿ ಹೊಂದಿದೆ.

8 Years of Modi Government: look at key pro-people schemes - In pics

2 / 8
8 Years of Modi Government: ಪ್ರಧಾನಿ ಮೋದಿ ಅವರ ಮಹತ್ವ ಯೋಜನೆಗಳು ಇಲ್ಲಿವೆ

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಕೊರೊನಾ ದೇಶದಲ್ಲಿ ಕಾಲಿಟ್ಟ ಸಮಯದಲ್ಲಿ ಅದರ ವಿರುದ್ಧದ ಹೋರಾಟದಲ್ಲಿ ಸಹಾಯ ಮಾಡಲು 1.70 ಲಕ್ಷ ಕೋಟಿ ರೂಪಾಯಿಗಳ ಸಮಗ್ರ ಪರಿಹಾರ ಪ್ಯಾಕೇಜ್ ಆಗಿದೆ. ಆಹಾರ ಮತ್ತು ಹಣವನ್ನು ಹೊಂದಿರದ ಬಡವರಿಗಾಗಿ ಇದನ್ನು ಮಾರ್ಚ್ 2020 ರಲ್ಲಿ ಘೋಷಿಸಲಾಯಿತು.

3 / 8
8 Years of Modi Government: ಪ್ರಧಾನಿ ಮೋದಿ ಅವರ ಮಹತ್ವ ಯೋಜನೆಗಳು ಇಲ್ಲಿವೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 1.12.2018 ಪ್ರಾರಂಭಿಸಲಾಯಿತು. ಈ ಯೋಜನೆಯಡಿಯಲ್ಲಿ ವರ್ಷಕ್ಕೆ 6,000/- ಆದಾಯ ಬೆಂಬಲವನ್ನು ಮೂರು ಸಮಾನ ಕಂತುಗಳಲ್ಲಿ ಎಲ್ಲಾ ಭೂಮಿ ಹೊಂದಿರುವ ರೈತ ಕುಟುಂಬಗಳಿಗೆ ಒದಗಿಸಲಾಗುತ್ತದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

4 / 8
8 Years of Modi Government: ಪ್ರಧಾನಿ ಮೋದಿ ಅವರ ಮಹತ್ವ ಯೋಜನೆಗಳು ಇಲ್ಲಿವೆ

ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (PMJDY) ಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 15 ಆಗಸ್ಟ್ 2014 ರಂದು ಸ್ವತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆ ಮೇಲೆ ನಿಂತು ಭಾಷಣ ಮಾಡುವಾಗ ಯೋಜನೆಯ ಕುರಿತು ಹೇಳಿದರು. ಆಗಸ್ಟ್ 28 ರಂದು ಕಾರ್ಯಕ್ರಮವನ್ನು ಪ್ರಾರಂಭಿಸಿತು.

5 / 8
8 Years of Modi Government: ಪ್ರಧಾನಿ ಮೋದಿ ಅವರ ಮಹತ್ವ ಯೋಜನೆಗಳು ಇಲ್ಲಿವೆ

ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಎಂಬುದು ಮೋದಿ ಸರ್ಕಾರದ ಒಂದು ಮಹತ್ವದ ಹೆಜ್ಜೆಯಾಗಿದ್ದು, ಮಹಿಳೆಯರಿಗೆ ಮತ್ತು ಮಕ್ಕಳಿಗೆ ಶುದ್ಧ ಅಡುಗೆ ಇಂಧನವನ್ನು ಒದಗಿಸುವ ಮೂಲಕ ಅವರ ಆರೋಗ್ಯವನ್ನು ಕಾಪಾಡುತ್ತದೆ - LPG. PMUY ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಮೇ 1, 2016 ರಂದು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪ್ರಾರಂಭಿಸಿದರು. PMUY ಅಡಿಯಲ್ಲಿ, ಮುಂದಿನ 3 ವರ್ಷಗಳಲ್ಲಿ BPL ಕುಟುಂಬಗಳಿಗೆ 5 ಕೋಟಿ LPG ಗ್ಯಾಸ್ ಒದಗಿಸಲಾಗುತ್ತದೆ. ಮಹಿಳಾ ಸಬಲೀಕರಣವನ್ನು ಖಾತ್ರಿಪಡಿಸುವುದು, ವಿಶೇಷವಾಗಿ ಗ್ರಾಮೀಣ ಭಾರತದಲ್ಲಿ, ಮನೆಗಳ ಮಹಿಳೆಯರ ಹೆಸರಿನಲ್ಲಿ ಗ್ಯಾಸ್ ನೀಡಲಾಗುತ್ತದೆ.

6 / 8
8 Years of Modi Government: ಪ್ರಧಾನಿ ಮೋದಿ ಅವರ ಮಹತ್ವ ಯೋಜನೆಗಳು ಇಲ್ಲಿವೆ

ಆಯುಷ್ಮಾನ್ ಭಾರತ್ ಅಥವಾ "ಆರೋಗ್ಯಕರ ಭಾರತ" ಯುನಿವರ್ಸಲ್ ಹೆಲ್ತ್ ಕವರೇಜ್ (UHC) ನ ದೃಷ್ಟಿಯನ್ನು ಸಾಧಿಸುವ ಸಲುವಾಗಿ ರಾಷ್ಟ್ರೀಯ ಆರೋಗ್ಯ ನೀತಿ 2017 ರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು. ಆಯುಷ್ಮಾನ್ ಭಾರತ್ ಪ್ರಾಥಮಿಕ, ಮಾಧ್ಯಮಿಕ ಮತ್ತು ತೃತೀಯ ಹಂತದಲ್ಲಿ ಆರೋಗ್ಯವನ್ನು ಸಮಗ್ರವಾಗಿ ಪರಿಹರಿಸಲು ಗುರಿಯನ್ನು ಹೊಂದಿದೆ.

7 / 8
8 Years of Modi Government: ಪ್ರಧಾನಿ ಮೋದಿ ಅವರ ಮಹತ್ವ ಯೋಜನೆಗಳು ಇಲ್ಲಿವೆ

ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಜೂನ್ 2015 ರಲ್ಲಿ "ಎಲ್ಲರಿಗೂ ವಸತಿ" ಎಂಬ ಪರಿಕಲ್ಪನೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಾರಂಭಿಸಲಾಯಿತು. PMAY ಯೋಜನೆಯು ಭಾರತದಲ್ಲಿ ಮನೆಯಿಲ್ಲದ ಜನರ ಜೀವನವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಯೋಜನೆಯು ಕಡಿಮೆ ಆದಾಯದ ಕುಟುಂಬಗಳು, ಮಧ್ಯಮ-ಆದಾಯದ ಗುಂಪುಗಳು ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಜನರಿಗೆ ಎರಡು ಕೋಟಿ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ.

8 / 8

Published On - 3:43 pm, Thu, 26 May 22

Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ