ಕೆಆರ್ಎಸ್, ಕಬಿನಿ ಡ್ಯಾಂಗಳಿಂದ ಹೊರಹರಿವು ಹೆಚ್ಚಳವಾಗಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ 9 ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. 2 ಡ್ಯಾಂಗಳಿಂದ 1.10 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದೆ. ಹಳೇ ಹಂಪಾಪುರ, ಮುಳ್ಳೂರು, ಹಳೇ ಅಣಗಳ್ಳಿ ದಾಸನಪುರ ಸೇರಿ 9 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿ ಪಾತ್ರದ ನೂರಾರು ಎಕರೆ ಜಮೀನು ಜಲಾವೃತಗೊಂಡಿವೆ. ಭತ್ತ, ಕಬ್ಬಿನ ಗದ್ದೆ, ಬಾಳೆ ತೋಟಗಳಿಗೆ ನುಗ್ಗಿದ ನೀರು ನುಗ್ಗಿದೆ.