- Kannada News Photo gallery A Fast Charging smartphone OnePlus 10 Pro 5G now available with big discount on Amazon
OnePlus 10 Pro 5G: ಧಮಾಕ ಆಫರ್: ಅರ್ಧ ಗಂಟೆಯಲ್ಲಿ ಫುಲ್ ಚಾರ್ಜ್ ಆಗುವ ಈ ಫೋನನ್ನು ಕಡಿಮೆ ಬೆಲೆಗೆ ಖರೀದಿಸಿ
ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಒನ್‌ಪ್ಲಸ್ 10 ಪ್ರೊ 5G ಫೋನ್ನಲ್ಲಿ ಕೇವಲ 32 ನಿಮಿಷಗಳಲ್ಲಿ ಶೂನ್ಯದಿಂದ 100% ಚಾರ್ಜ್ ಆಗುತ್ತದೆ ಎಂಬುದು ವಿಶೇಷ. ಹಾಗಾದರೆ ಈ ಫೋನ್ ಅನ್ನು ಆಫರ್ನಲ್ಲಿ ಎಷ್ಟು ಬೆಲೆಗೆ ಖರೀದಿಸಬಹುದು ಎಂಬುದನ್ನು ನೋಡೋಣ.
Updated on: Jul 30, 2023 | 2:56 PM

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಯಾವುದೇ ಮೇಳಗಳು ನಡೆಯುತ್ತಿಲ್ಲ. ಆದರೂ ಆಯ್ದ ಕೆಲ ಸ್ಮಾರ್ಟ್ಫೋನ್ಗಳು ಬಂಪರ್ ಡಿಸ್ಕೌಂಟ್ನಲ್ಲಿ ಮಾರಾಟ ಆಗುತ್ತಿದೆ. ಭಾರತದಲ್ಲಿ ಈ ಕಳೆದ ವರ್ಷ ಲಾಂಚ್ ಆಗಿದ್ದ ಒನ್‌ಪ್ಲಸ್ ಕಂಪನಿಯ ಒನ್‌ಪ್ಲಸ್ 10 ಪ್ರೊ 5G ಈಗ ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಒನ್‌ಪ್ಲಸ್ 10 ಪ್ರೊ 5G ಫೋನ್ನಲ್ಲಿ ಕೇವಲ 32 ನಿಮಿಷಗಳಲ್ಲಿ ಶೂನ್ಯದಿಂದ 100% ಚಾರ್ಜ್ ಆಗುತ್ತದೆ ಎಂಬುದು ವಿಶೇಷ. ಹಾಗಾದರೆ ಈ ಫೋನ್ ಅನ್ನು ಆಫರ್ನಲ್ಲಿ ಎಷ್ಟು ಬೆಲೆಗೆ ಖರೀದಿಸಬಹುದು ಎಂಬುದನ್ನು ನೋಡೋಣ.

ಭಾರತದಲ್ಲಿ ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನ್ ಒಟ್ಟು ಎರಡು ಮಾದರಿಯಲ್ಲಿ ಅನಾವರಣಗೊಂಡಿತ್ತು. ಇದರ ಬೇಸ್ ಮಾಡೆಲ್ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 66,999 ರೂ. ಮತ್ತು 12GB RAM ಮತ್ತು 256GB ಸ್ಟೋರೇಜ್ ಮಾಡೆಲ್ ಆಯ್ಕೆಗೆ 71,999 ರೂ. ಬೆಲೆ ಇದೆ.

ಇದೀಗ ಅಮೆಜಾನ್ನಲ್ಲಿ ಈ ಫೋನಿನ 8GB RAM ರೂಪಾಂತರವನ್ನು 56,999 ರೂ. ಗೆ ಖರೀದಿಸಬಹುದು. ಅಲ್ಲದೆ ಆಯ್ದ ಕ್ರೆಡಿಟ್ ಕಾರ್ಡ್ಗಳಿಗೆ 5,000 ರೂ. ವರೆಗೆ ಡಿಸ್ಕೌಂಟ್ ಸಿಗಲಿದೆ. ಎಕ್ಸ್ಚೇಂಜ್ ಆಫರ್ ಕೂಡ ನೀಡಲಾಗಿದೆ.

ಒನ್‌ಪ್ಲಸ್ 10 ಪ್ರೊ ಸ್ಮಾರ್ಟ್‌ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ ಇದು 1,440×3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ sRGB ಬಣ್ಣದ ಹರವುಗಳನ್ನು ಸಹ ಬೆಂಬಲಿಸುತ್ತದೆ.

ಇದಲ್ಲದೆ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಪಡೆದಿದೆ. ಆಕ್ಟಾ–ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ–ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ದೀರ್ಘ ಸಮಯ ಬಾಳಿಕೆ ಬರುವ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್‌ವೂಕ್ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ.




