AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ಹಣದಲ್ಲೇ ಸರ್ಕಾರಿ ಶಾಲೆ ಮಕ್ಕಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ

ತುಮಕೂರಿನ ಶಿಕ್ಷಕ ರಾಜಣ್ಣ ಅವರು 51 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸ್ವಂತ ಖರ್ಚಿನಲ್ಲಿ ಬೆಂಗಳೂರಿನಿಂದ ಪುಣೆಗೆ ವಿಮಾನದಲ್ಲಿ ಕರೆದೊಯ್ದಿದ್ದಾರೆ. ಇದು ವಿದ್ಯಾರ್ಥಿಗಳಿಗೆ ಅವಿಸ್ಮರಣೀಯ ಅನುಭವವಾಗಿದ್ದು, ಶಿಕ್ಷಕರ ಕಾರ್ಯಕ್ಕೆ ಎಲ್ಲರ ಮೆಚ್ಚುಗೆ ವ್ಯಕ್ತವಾಗಿದೆ. ಪುಣೆಯಿಂದ ಶಿರಡಿ, ನಾಸಿಕ್, ಮತ್ತು ಇತರ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ವಾಪಸ್ಸಾಗಿದ್ದಾರೆ.

ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Dec 09, 2024 | 8:40 PM

Share
ಎಲ್ಲರಿಗೂ ಆಸೆ ಇದ್ದೆ ಇರುತ್ತೆ. ಒಂದು ಬಾರಿಯಾದರೂ ವಿಮಾನದಲ್ಲಿ ಪ್ರಯಾಣ ಮಾಡಬೇಕು. ಅದರಲ್ಲೂ ಮಧ್ಯಮವರ್ಗದ ಬಡಮಕ್ಕಳು ಕೂಡ ಈ ಕನಸನ್ನ ಕಾಣುತ್ತಿರುತ್ತಾರೆ. ಸದ್ಯ ಆ ಕನಸು ನನಸಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕರೊಬ್ಬರು ವಿಮಾನ ಭಾಗ್ಯ ಕಲ್ಪಿಸಿದ್ದು, ಮಕ್ಕಳೊಂದಿಗೆ ಶಿಕ್ಷಕರು ಫುಲ್ ಖುಷ್ ಆಗಿದ್ದಾರೆ.

1 / 5
ತುಮಕೂರು ತಾಲೂಕಿನ ಹರಳೂರು ಗ್ರಾಮದಲ್ಲಿರುವ ಶ್ರೀ ಸಿದ್ದಗಂಗಾ ಸಂಸ್ಥೆಯ ಶ್ರೀ ವೀರಭದ್ರೇಶ್ವರ ಗ್ರಾಮಾಂತರ ಪ್ರೌಢಶಾಲೆಯ ಸಂಸ್ಕೃತ ಪಾಠಶಾಲೆಯ ಮುಖ್ಯಶಿಕ್ಷಕ ರಾಜಣ್ಣ ಎಂಬುವರು ತಮ್ಮ ಶಾಲೆಯ ಒಟ್ಟು 51 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಅಡುಗೆ ಸಿಬ್ಬಂದಿಯನ್ನು ಬೆಂಗಳೂರಿನಿಂದ ಪುಣೆಗೆ ಕರೆದುಕೊಂಡು ಹೋಗಿದ್ದಾರೆ.

2 / 5
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪುಣೆಗೆ ತೆರಳಿ, ಅಲ್ಲಿಂದ ಶಿರಡಿ, ನಾಸಿಕ್, ಪಂಡರಾಪುರ, ಶನಿ ಶಿಂಗ್ನಾಪುರ, ಅಜಂತಾ ಎಲ್ಲೋರಾ ಸೇರಿದಂತೆ ವಿಜಯಪುರ ಪ್ರವಾಸ ಮುಗಿಸಿ ಬಂದಿದ್ದಾರೆ. ಒಟ್ಟು 2,67 ಲಕ್ಷ ರೂ. ಹಣವನ್ನ ತಾವೇ ನೀಡಿದ್ದಾರೆ. ಸದ್ಯ ಪ್ರವಾಸ ಮುಗಿಸಿ ಬಂದ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಫುಲ್​ ಖುಷ್ ಆಗಿದ್ದಾರೆ.

3 / 5
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಕ ರಾಜಣ್ಣ, ನಾನು ಚಿಕ್ಕವಯಸ್ಸಿನಿಂದ ವಿಮಾನದಲ್ಲಿ ಓಡಾಡಬೇಕು ಅಂತಾ  ಆಸೆ ಇತ್ತು. ಆಕಾಶದಲ್ಲಿ ವಿಮಾನ ಹೋದರೆ ಅದು ನೋಡಿ ಖುಷಿ ಪಡುತ್ತಿದ್ದೆ. ಹೀಗಾಗಿ ಏನಾದರೂ ಮಾಡಿ ನಮ್ಮ ಶಾಲಾ ಮಕ್ಕಳನ್ನ ವಿಮಾನದಲ್ಲಿ ಕರೆದುಕೊಂಡು ಹೋಗಿ ಅವರಿಗೂ ಆ ಅನುಭವ ನೀಡಿ ಖುಷಿ ಪಡಬೇಕೆನಿಸಿತು. ಹೀಗಾಗಿ ಸ್ವಂತ ಖರ್ಚಿನಲ್ಲಿ ಇದನ್ನ ಮಾಡಿದ್ದೇನೆ ಎಂದಿದ್ದಾರೆ.

4 / 5
ಒಂದು ಬಾರಿಯಾದರೂ ವಿಮಾನ ಪ್ರಯಾಣ ಮಾಡಬೇಕೆಂಬ ಆಸೆ ಎಲ್ಲರಿಗೂ ಇರುತ್ತೆ. ಸದ್ಯ ಶಿಕ್ಷಕ ವಿದ್ಯಾರ್ಥಿಗಳ ಕನಸು ನನಸು ಮಾಡಿ ಸೈ ಎನಿಸಿಕೊಂಡಿದ್ದಾರೆ. 

5 / 5
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ