
ನಟಿ ಆರಾಧ್ಯಾ ಬಚ್ಚನ್ ಅವರು ತಾಯಿ ಐಶ್ವರ್ಯಾ ರೈ ಜೊತೆ ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರ ಫೋಟೋಗೆ ಮೆಚ್ಚುಗೆ ಸಿಕ್ಕಿದೆ.

ಐಶ್ವರ್ಯಾ ರೈ ಅವರು ಬಾಲಿವುಡ್ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಅವರು ಈಗಲೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಬೇಡಿಕೆ ಹೆಚ್ಚಿದೆ. ಅವರು ಮಗಳ ಜೊತೆ ಆಗಾಗ ಸುತ್ತಾಟ ನಡೆಸುತ್ತಾ ಇರುತ್ತಾರೆ.

ಆರಾಧ್ಯಾ ಬಚ್ಚನ್ ಅವರು ಸೈಮಾ ಅವಾರ್ಡ್ಸ್ ಕಾರ್ಯಕ್ರಮಕ್ಕಾಗಿ ದುಬೈಗೆ ತೆರಳಿದ್ದಾರೆ. ಅಲ್ಲಿ ಅವರು ತಾಯಿಯ ಖುಷಿಯ ಕ್ಷಣಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ.

ತಮಿಳು ನಟ ವಿಕ್ರಮ್ ಅವರ ಜೊತೆ ಆರಾಧ್ಯಾ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಕುಳಿತಿರುವ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ವಿಕ್ರಮ್ ಹಾಗೂ ಆರಾಧ್ಯಾ ಮಾತನಾಡಿಕೊಂಡಿದ್ದಾರೆ.

ಐಶ್ವರ್ಯಾ ರೈ ಹಾಗೂ ವಿಕ್ರಮ್ ಅವರು ‘ಪೊನ್ನಿಯಿನ್ ಸೆಲ್ವನ್’ ಹಾಗೂ ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟ ಆಗಿದೆ.