- Kannada News Photo gallery Abhishek Ambareesh Marriage Pics: Ashwath Narayan Bharathi Vishnuvardhan and others grace the event
Abhishek Ambareesh: ಅಭಿಷೇಕ್-ಅವಿವಾ ಮದುವೆಗೆ ಬಂದು ಶುಭ ಕೋರಿದ ಪ್ರಣಿತಾ, ಭಾರತಿ ವಿಷ್ಣುವರ್ಧನ್, ಅನಿರುದ್ಧ್, ಅಶ್ವತ್ಥ ನಾರಾಯಣ್
Abhishek Ambareesh Marriage Photos: ಸೆಲೆಬ್ರಿಟಿ ವಿವಾಹಕ್ಕೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.
Updated on: Jun 05, 2023 | 5:06 PM

‘ರೆಬೆಲ್ ಸ್ಟಾರ್’ ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರು ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ವಿವಾಹ ತುಂಬ ಅದ್ದೂರಿಯಾಗಿ ಇಂದು (ಜೂನ್ 5) ನಡೆದಿದೆ.

ಡಾ. ವಿಷ್ಣುವರ್ಧನ್ ಮತ್ತು ಅಂಬರೀಷ್ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಅಭಿಷೇಕ್ ಅಂಬರೀಷ್-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ.

ಸುಮಲತಾ ಅಂಬರೀಷ್ ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

ನಟಿ ಪ್ರಣಿತಾ ಸುಭಾಷ್ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ನಿರ್ದೇಶಕ ಮಹೇಶ್ ಕುಮಾರ್ ಅವರು ಅಭಿಷೇಕ್ ಅಂಬರೀಷ್ ಜೊತೆ ಒಟನಾಡ ಹೊಂದಿದ್ದಾರೆ. ಅವರು ಕೂಡ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.




