ಶಕ್ತಿ ಯೋಜನೆ ಜಾರಿ, ವಿದ್ಯಾರ್ಥಿಗಳ ಪರದಾಟ: ಗದಗನಲ್ಲಿ ಎಬಿವಿಪಿ ಪ್ರತಿಭಟನೆ
ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಸರ್ಕಾರ ಮತ್ತು ಕೆಎಸ್ಆರ್ಟಿಸಿ ವಿರುದ್ಧ ಸಿಡಿದೆದಿದ್ದಾರೆ. ಗದಗ ನಗರದ ಪುಟ್ಟರಾಜ್ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
Updated on:Dec 01, 2023 | 2:34 PM

ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗುತ್ತಿದೆ.

ಹೀಗಾಗಿ ವಿದ್ಯಾರ್ಥಿಗಳು ಸರ್ಕಾರ ಮತ್ತು ಕೆಎಸ್ಆರ್ಟಿಸಿ ವಿರುದ್ಧ ಸಿಡಿದೆದಿದ್ದಾರೆ. ಗದಗ ನಗರದ ಪುಟ್ಟರಾಜ್ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ಗೆ ಕಲ್ಲು ತೂರಿದ್ದಾರೆ ಎಂದು ಬಸ್ ಚಾಲಕ ಆರೋಪ ಮಾಡಿದ್ದಾರೆ.

ಪುಟ್ಟರಾಜ್ ಬಸ್ ನಿಲ್ದಾಣದ ಎರಡು ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಇದರಿಂದ ಬಸ್ಗಳು ರಸ್ತೆಯಲ್ಲೇ ನಿಂತಿದ್ದವು. ಹೀಗಾಗಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿತ್ತು.

ಪ್ರತಿಭಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸಿಪಿಐ ಡಿಬಿ ಪಾಟೀಲ್ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು. ಈ ವೇಳೆ ವಿದ್ಯಾರ್ಥಿಗಳು ಹಾಗೂ ಸಿಪಿಐ ನಡುವೆ ವಾಗ್ವಾದ ನಡೆಯಿತು.

ಬಳಿಕ ವಿದ್ಯಾರ್ಥಿಗಳು ಸಿಪಿಐ ಡಿಬಿ ಪಾಟೀಲ್ ಅವರನ್ನು ಸುತ್ತುವರಿದು, ರಸ್ತೆ ಬಂದ್ ಮಾಡಿದರು. ಇದರಿಂದ 20ಕ್ಕೂ ಹೆಚ್ಚು ಬಸ್ಗಳು ರಸ್ತೆಯಲ್ಲೇ ನಿಂತಿದ್ದವು.
Published On - 2:32 pm, Fri, 1 December 23



















