
ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರು 1962ರ ಮೇ 27ರಂದು ಮುಂಬೈಯಲ್ಲಿ ಜನಿಸಿದರು. ಅವರು ಇಂದು 60ನೇ ವರ್ಷಕ್ಕೆ ಕಾಲಿಟ್ಟರು.

ಭಾರತದ ಕ್ರಿಕೆಟ್ ತಂಡದ ಆಟಗಾರರು ರವಿ ಶಾಸ್ತ್ರಿಯವರ ಜನ್ಮ ದಿನಾಚರಣೆಗೆ ಶುಭಕೋರಿದ್ದಾರೆ. ಮುಖ್ಯ ಕೋಚ್ ರವಿಶಾಸ್ತ್ರಿ ನೇತೃತ್ವದಲ್ಲಿ ಭಾರತ ತಂಡದ ಕೆಲವು ಸಾಧನೆಗಳು ಈ ಕೆಳಗಿನಂತಿವೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಲು ಟೀಂ ಇಂಡಿಯಾ ವಿಫಲವಾಗಿತ್ತು. ಆದರೂ ರವಿಶಾಸ್ತ್ರಿ ಅವರ ಕೋಚಿಂಗ್‌ನಲ್ಲಿ ಭಾರತವು ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾಯಿತು.

ಭಾರತವು ಆಸ್ಟ್ರೇಲಿಯಾವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಐಸಿಸಿ ವಿಶ್ವಕಪ್ 2019 ರ ಗ್ರೂಪ್ ಹಂತದಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಕೈಬಿಡದೆ ಸೆಮಿಫೈನಲ್ ತಲುಪಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ಆದರೆ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲು ಎದುರಿಸಿದೆ.

ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಏಷ್ಯಾದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾ ಪಾತ್ರವಾಗಿದೆ.
Published On - 5:24 pm, Fri, 27 May 22