81ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್

Updated on: Aug 19, 2023 | 1:13 PM

ದ್ವಾರಕೀಶ್ ಅವರಿಗೆ ಚಿತ್ರರಂಗದಲ್ಲಿ ಇರುವ ಅನುಭವ ಅಪಾರ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಚಿತ್ರರಂಗದ ಹಲವು ಖ್ಯಾತ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಮಾಡಿದ ಸಿನಿಮಾಗಳು ಈಗಲೂ ಅನೇಕರ ಫೇವರಿಟ್ ಲಿಸ್ಟ್​ನಲ್ಲಿದೆ.

1 / 6
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರಿಗೆ ಇಂದು (ಆಗಸ್ಟ್ 19) ಜನ್ಮದಿನದ ಸಂಭ್ರಮ. ಅವರು 81ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅವರಿಗೆ ಚಿತ್ರರಂಗದ ಅನೇಕರು ಶುಭ ಹಾರೈಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರಿಗೆ ಇಂದು (ಆಗಸ್ಟ್ 19) ಜನ್ಮದಿನದ ಸಂಭ್ರಮ. ಅವರು 81ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅವರಿಗೆ ಚಿತ್ರರಂಗದ ಅನೇಕರು ಶುಭ ಹಾರೈಸಿದ್ದಾರೆ.

2 / 6

ಕರ್ನಾಟಕ ಫಿಲ್ಮ್​ ಚೇಂಬರ್ ಅಧ್ಯಕ್ಷ ಭಾ.ಮ. ಹರೀಶ್ ಹಾಗೂ ಇತರ ಪದಾಧಿಕಾರಿಗಳು ದ್ವಾರಕೀಶ್ ಮನೆಗೆ ಭೇಟಿ ನೀಡಿದ್ದಾರೆ. ದ್ವಾರಕೀಶ್ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿ ಅವರನ್ನು ಸನ್ಮಾನಿಸಲಾಯಿತು.

3 / 6

ದ್ವಾರಕೀಶ್ ಅವರಿಗೆ ಚಿತ್ರರಂಗದಲ್ಲಿ ಇರುವ ಅನುಭವ ಅಪಾರ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಚಿತ್ರರಂಗದ ಹಲವು ಖ್ಯಾತ ನಟರ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಮಾಡಿದ ಸಿನಿಮಾಗಳು ಈಗಲೂ ಅನೇಕರ ಫೇವರಿಟ್ ಲಿಸ್ಟ್​ನಲ್ಲಿದೆ.

4 / 6

ದ್ವಾರಕೀಶ್ ಅವರು ಹಾಸ್ಯ ಪಾತ್ರದ ಮೂಲಕ ಜನಮನ ಗೆದ್ದಿದ್ದಾರೆ. ಅವರು ಮಾಡುತ್ತಿದ್ದ ಕಾಮಿಡಿಗೆ ಪ್ರೇಕ್ಷಕರು ಹೊಟ್ಟೆಹುಣ್ಣಾಗುವಂತೆ ನಕ್ಕಿದ್ದಿದೆ. ಅವರು ಮಾಡಿರುವ ಪಾತ್ರಗಳು ಈಗಲೂ ಜನಮನದಲ್ಲಿ ಉಳಿದುಕೊಂಡಿವೆ.

5 / 6

1964ರಲ್ಲಿ ರಿಲೀಸ್ ಆದ ‘ವೀರ ಸಂಕಲ್ಪ’ ಚಿತ್ರದ ಮೂಲಕ ದ್ವಾರಕೀಶ್ ಅವರು ಕಲಾವಿದನಾಗಿ ಚಿತ್ರರಂಗಕ್ಕೆ ಎಂಟ್ರಿ ಪಡೆದರು. ನಂತರ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಬಳಿಕ ಅವರು ಸಿನಿಮಾ ನಿರ್ಮಾಣಕ್ಕೂ ಇಳಿದರು.

6 / 6

1996ರ ‘ಮಮತೆಯ ಬಂಧನ’ ಚಿತ್ರದ ಮೂಲಕ ದ್ವಾರಕೀಶ್ ಅವರು ನಿರ್ಮಾಪಕರಾದರು. ‘ನೀ ಬರೆದ ಕಾದಂಬರಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿ ನಿರ್ದೇಶಕನ ಕ್ಯಾಪ್ ತೊಟ್ಟರು. ಸಾಕಷ್ಟು ಚಿತ್ರಗಳನ್ನು ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us