AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ನಿರಂಜನ್ ಸುಧೀಂದ್ರ-ಸಂಜನಾ ಮದುವೆಯ ಸುಂದರ ಫೋಟೋಸ್

ನಟ ನಿರಂಜನ್ ಸುಧೀಂದ್ರ ಅವರು ಸಂಜನಾ ರಾಜ್ ಅವರನ್ನು ವಿವಾಹವಾಗಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಮದುವೆ ಸಂಭ್ರಮದಲ್ಲಿ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಕುಟುಂಬ ಸಮೇತ ಭಾಗವಹಿಸಿ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ವಿವಾಹದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ರಾಜೇಶ್ ದುಗ್ಗುಮನೆ
|

Updated on: Nov 19, 2026 | 2:39 PM

Share
ನಟ ನಿರಂಜನ್ ಸುಧೀಂದ್ರ ಅವರು ಇತ್ತೀಚೆಗೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಸಂಜನಾ ರಾಜ್ ಅವರನ್ನು ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಹೆಜ್ಜೆ ಹಾಕಿದ್ದಾರೆ. ನಿರಂಜನ್ ಅವರು ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗನಾಗಿದ್ದಾರೆ. ವಿವಾಹ ಸಮಾರಂಭದಲ್ಲಿ ಹಲವು ಸೆಲೆಬ್ರಿಟಿಗಳು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ. ಸಂಜನಾ ಅವರು ಚಿತ್ರರಂಗದವರಲ್ಲ. ಅವರು ವೃತ್ತಿಯಲ್ಲಿ ವೈದ್ಯೆ ಆಗಿದ್ದಾರೆ.

1 / 5
ಮದುವೆ ಸಂಭ್ರಮದ ಫೋಟೋ ಮತ್ತು ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದಕ್ಕೂ ಮುನ್ನ ನಿರಂಜನ್ ಸುಧೀಂದ್ರ ಮತ್ತು ಸಂಜನಾ ರಾಜ್ ಮೇ 25, 2026ರಂದು ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಸರಳ ಸಮಾರಂಭದಲ್ಲಿ ಈ ಜೋಡಿ ಉಂಗುರ ಬದಲಾಯಿಸಿಕೊಂಡಿತ್ತು. ಈಗ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದೆ.

2 / 5
ನಿರಂಜನ್ ಮದುವೆ ಸಂಭ್ರಮದಲ್ಲಿ ನಟ ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಕುಟುಂಬ ಸಮೇತ ಭಾಗವಹಿಸಿದ್ದರು. ಸಮಾರಂಭದಲ್ಲಿ ಉಪೇಂದ್ರ ಹಾಗೂ ಪ್ರಿಯಾಂಕಾ ಉತ್ಸಾಹದಿಂದ ನೃತ್ಯ ಮಾಡಿ ಸಂಭ್ರಮಕ್ಕೆ ಮೆರುಗು ತಂದಿದ್ದಾರೆ. ಈ ಡ್ಯಾನ್ಸ್ ವಿಡಿಯೋಗಳು ಅಭಿಮಾನಿಗಳ ಗಮನ ಸೆಳೆದಿವೆ.

3 / 5
ನಟ ನಿರಂಜನ್ ಸುಧೀಂದ್ರ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. '2nd ಹಾಫ್' ಮತ್ತು 'ಸ್ಪಾರ್ಕ್' ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅರ್ಜುನ್ ಸರ್ಜಾ ನಿರ್ದೇಶನದ ತೆಲುಗು  ಭಾಷೆಯಲ್ಲಿ ಬಂದ 'ಸೀತಾ ಪಯಣಂ' ಚಿತ್ರದಲ್ಲೂ ನಟಿಸಿದ್ದಾರೆ. ಐಶ್ವರ್ಯಾ ಅರ್ಜುನ್ ಈ ಸಿನಿಮಾದ ನಾಯಕಿಯಾಗಿದ್ದರು. ಈ ಸಿನಿಮಾ ಕನ್ನಡಕ್ಕೆ ಡಬ್ ಆಗಿ ತೆರೆಕಂಡಿತ್ತು.

4 / 5
ಮತ್ತೊಂದೆಡೆ ಪ್ರಿಯಾಂಕಾ ಹಾಗೂ ಉಪೇಂದ್ರ ಅವರ ಮಗ ಆಯುಷ್ ಚಿತ್ರರಂಗಕ್ಕೆ ಬರಲು ಸಿದ್ಧರಾಗಿದ್ದಾರೆ. ಅವರ ಮೊದಲ ಚಿತ್ರವೇ ವಿವಾದಕ್ಕೆ ಕಾರಣವಾಗಿತ್ತು. ನಿರ್ದೇಶಕರನ್ನು ಸಿನಿಮಾದಿಂದ ಹೊರಗಿಟ್ಟ ವಿಷಯ ಚರ್ಚೆಗೆ ಕಾರಣ ಆಗಿತ್ತು. ಆದರೆ, ಈಗ ಸಂಧಾನ ಮಾತುಕತೆ ನಡೆದಿದ್ದು, ಅದು ಫಲಪ್ರಧವಾಗಿದೆ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us