- Kannada News Photo gallery Actor Prakash Raj joins the cast of Komal Kumar starrer Kalaya Namaha Kannada movie
Prakash Raj: ‘ಕಾಲಾಯ ನಮಃ’ ಚಿತ್ರಕ್ಕೆ ಬಿರುಸಿನ ಶೂಟಿಂಗ್; ಕೋಮಲ್ ಕುಮಾರ್ ಜೊತೆ ಪ್ರಕಾಶ್ ರೈ ಅಭಿನಯ
Komal Kumar | Kalaya Namaha: ಮೈಸೂರಿನಲ್ಲಿ ‘ಕಾಲಾಯ ನಮಃ’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಕೋಮಲ್ ಕುಮಾರ್ ಜೊತೆ ಬಹುಭಾಷಾ ನಟ ಪ್ರಕಾಶ್ ರೈ ಅವರು ಅಭಿನಯಿಸುತ್ತಿದ್ದಾರೆ.
Updated on: Jan 10, 2023 | 9:26 PM

ಕೋಮಲ್ ಕುಮಾರ್ ಅವರು ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಬರೋಬ್ಬರಿ ಐದು ವರ್ಷಗಳ ಬಳಿಕ ಅವರು ‘ಕಾಲಾಯ ನಮಃ’ ಸಿನಿಮಾದಲ್ಲಿ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಸಿನಿಮಾ ಮೇಲೆ ಫ್ಯಾನ್ಸ್ಗೆ ನಿರೀಕ್ಷೆ ಇದೆ.

ಕೋಮಲ್ ಅವರ ಕಮ್ಬ್ಯಾಕ್ ಸಿನಿಮಾ ಎಂಬ ಕಾರಣಕ್ಕೆ ‘ಕಾಲಾಯ ನಮಃ’ ಚಿತ್ರ ಹೈಪ್ ಸೃಷ್ಟಿ ಮಾಡಿದೆ. ಪ್ರಸ್ತುತ ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಇಡೀ ಚಿತ್ರತಂಡ ಶೂಟಿಂಗ್ನಲ್ಲಿ ಬ್ಯುಸಿ ಆಗಿದೆ.

ಈಗ ‘ಕಾಲಾಯ ನಮಃ’ ಚಿತ್ರತಂಡದಿಂದ ಮತ್ತೊಂದು ಖುಷಿಯ ಸಮಾಚಾರ ಕೇಳಿಬಂದಿದೆ. ದೇಶಾದ್ಯಂತ ಹೆಸರು ಮಾಡಿರುವ ಬಹುಭಾಷಾ ನಟ ಪ್ರಕಾಶ್ ರೈ ಅವರು ಈ ಚಿತ್ರದ ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದಾರೆ. ಅವರು ಕೂಡ ಶೂಟಿಂಗ್ನಲ್ಲಿ ಭಾಗಿ ಆಗಿದ್ದಾರೆ.

‘ಕಾಲಾಯ ನಮಃ’ ಚಿತ್ರದಲ್ಲಿ ಪ್ರಕಾಶ್ ರೈ ಅಭಿನಯಿಸುತ್ತಿದ್ದಾರೆ. ಅವರ ಭಾಗದ ದೃಶ್ಯಗಳ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಅನುಸೂಯಾ ಕೋಮಲ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮತಿವಣನ್ ನಿರ್ದೇಶಿಸುತ್ತಿದ್ದಾರೆ.

ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ. ತಿಲಕ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೋಮಲ್ ಕುಮಾರ್, ಆಸಿಯಾ ಫಿರ್ದೋಸ್, ಪ್ರಕಾಶ್ ರೈ, ಸುಚೇಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಮುಂತಾದವರು ‘ಕಾಲಾಯ ನಮಃ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.




