ಗಣೇಶ್, ಯಶ್, ಲವ್ಲೀ ಸ್ಟಾರ್ ಪ್ರೇಮ್, ಕೃಷ್ಣ ಅಜಯ್ ರಾವ್, ದುನಿಯಾ ವಿಜಯ್ ಮುಂತಾದ ಸ್ಟಾರ್ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದರು. ‘ನಾನು ನನ್ನ ಕನಸು’ ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್ ರೈ ಜತೆ ತೆರೆಹಂಚಿಕೊಂಡು ಮೆಚ್ಚುಗೆ ಗಳಿಸಿದರು. ಹೀಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇರುವಾಗಲೇ ಅವರು 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.