Updated on: Aug 05, 2022 | 2:29 PM
ನಟಿ ಅಮೂಲ್ಯ ಅವರು ಸದ್ಯ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರಿಗೆ ಅವಳಿ ಮಕ್ಕಳು ಜನಿಸಿದವು. ಈಗ ಅಮೂಲ್ಯ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.
ಇಂದು (ಆಗಸ್ಟ್ 5) ವರಮಹಾಲಕ್ಷ್ಮಿ ಹಬ್ಬ. ಈ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ಅವರು ತಮ್ಮ ಮುದ್ದಾದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಲಂಗ-ದಾವಣಿ ತೊಟ್ಟು ಅಮೂಲ್ಯ ಅವರು ಮಿಂಚಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ್ದಾರೆ.
ಅಮೂಲ್ಯ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಮಕ್ಕಳಿಗೆ ಅವರು ಏನು ಹೆಸರು ಇಡುತ್ತಾರೆ ಅನ್ನೋದು ಸದ್ಯದ ಕುತೂಹಲ.
ಶರಣ್ ಹಾಗೂ ನಿಶ್ವಿಕಾ ನಟನೆಯ ‘ಗುರು ಶಿಷ್ಯರು’ ಚಿತ್ರದ ‘ಆಣೆ ಮಾಡಿ ಹೇಳುತೀನಿ..’ ಹಾಡು ಸೂಪರ್ ಹಿಟ್ ಆಗಿದೆ. ಈ ಹಾಡಿಗೆ ಅಮೂಲ್ಯ ಡ್ಯಾನ್ಸ್ ಮಾಡಿದ್ದರು. ಈ ವಿಡಿಯೋ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.