- Kannada News Photo gallery Actress Amulya Shares new Photo After She blessed with twins Fans call it her as Santoor Mummy
ಹೊಸ ಫೋಟೋಶೂಟ್ನಲ್ಲಿ ಮಿಂಚಿದ ನಟಿ ಅಮೂಲ್ಯ; ಸಂತೂರ್ ಮಮ್ಮಿ ಎಂದ ಫ್ಯಾನ್ಸ್
ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.
Updated on:Jun 18, 2022 | 6:29 PM

ಮಗುವಿಗೆ ಜನ್ಮ ನೀಡಿದ ನಂತರದಲ್ಲಿ ಸಾಮಾನ್ಯವಾಗಿ ಮಹಿಳೆಯರ ದೇಹದ ತೂಕ ಹೆಚ್ಚುತ್ತದೆ. ಹೀಗಾಗಿ, ಹೀರೋಯಿನ್ಗಳು ಡೆಲಿವರಿ ಆದ ಕೆಲ ತಿಂಗಳ ಜಿಮ್ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ.

ಅಮೂಲ್ಯ ಅವರು ಕೆಲ ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈಗ ಅವರು ಫೋಟೋಶೂಟ್ ಒಂದರಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಅವಳಿ ಮಕ್ಕಳ ತಾಯಿ ಎಂದು ಹೇಳಲು ಸಾಧ್ಯವೇ ಇಲ್ಲ. ಆ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅಮೂಲ್ಯ ಅವರನ್ನು ‘ಸಂತೂರ್ ಮಮ್ಮಿ’ ಎಂದು ಕರೆದಿದ್ದಾರೆ.

ಅಮೂಲ್ಯ ಅವರಿಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ಇತ್ತೀಚೆಗೆ ಮಕ್ಕಳ ಕಾಲಿನ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ಅಭಿಮಾನಿ ವಲಯದಲ್ಲಿ ವೈರಲ್ ಆಗಿತ್ತು.

ಅಮೂಲ್ಯ ಅವರು ಪ್ರೆಗ್ನೆಂಟ್ ಆಗಿದ್ದ ಸಂದರ್ಭದಲ್ಲಿ ಹಲವು ಬಗೆಯ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ವೈರಲ್ ಆಗಿತ್ತು.
Published On - 6:25 pm, Sat, 18 June 22