ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಕಾಜಲ್ ಅಗರ್ವಾಲ್ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಸದ್ಯಕ್ಕೆ ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡಿದ್ದಾರೆ.
ಉದ್ಯಮಿ ಗೌತಮ್ ಕಿಚಲು ಜೊತೆ ಮದುವೆ ಆಗಿರುವ ಕಾಜಲ್ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ನಟನೆಯಿಂದ ಕೊಂಚ ಬ್ರೇಕ್ ಪಡೆದಿದ್ದರೂ ಕೂಡ ಅವರ ಅಭಿಮಾನಿಗಳ ಸಂಖ್ಯೆ ತಗ್ಗಿಲ್ಲ.
ಸೋಶಿಯಲ್ ಮೀಡಿಯಾದಲ್ಲಿ ಕಾಜಲ್ ಅಗರ್ವಾಲ್ ಸದಾ ಆ್ಯಕ್ಟೀವ್ ಆಗಿ ಇರುತ್ತಾರೆ. ಇನ್ಸ್ಟಾಗ್ರಾಮ್ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ 21 ಮಿಲಿಯನ್ ಫಾಲೋವರ್ಸ್ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್ ಮಾಡಿ ಸಂಭ್ರಮಿಸಿದ್ದಾರೆ.
ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್ ಫೋಟೋಶೂಟ್ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.