
ಖ್ಯಾತ ನಟಿ ಮೌನಿ ರಾಯ್ ಅವರ ಬದುಕಿನಲ್ಲೀಗ ಹೊಸ ಅಧ್ಯಾಯ ಆರಂಭ ಆಗಿದೆ. ಪ್ರಿಯಕರ ಸೂರಜ್ ನಂಬಿಯಾರ್ ಜೊತೆ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಕೆಲವೇ ಕೆಲವು ಗಣ್ಯರ ಸಮ್ಮುಖದಲ್ಲಿ ಮದುವೆ ನಡೆದಿದೆ.

ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಸ್ನೇಹಿತರು ನವ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

ಉದ್ಯಮಿ ಆಗಿರುವ ಸೂರಜ್ ನಂಬಿಯಾರ್ ಅವರು ಕೇರಳ ಮೂಲದವರು. ಮೌನಿ ರಾಯ್ ಪಶ್ಚಿಮ ಬಂಗಾಳದವರು ಹಾಗಾಗಿ ಎರಡೂ ಕುಟುಂಬದ ಸಂಪ್ರದಾಯದ ಪ್ರಕಾರ ಮದುವೆ ನಡೆಯುತ್ತಿದೆ.

ಮಲಯಾಳಿ ಪದ್ಧತಿಯಂತೆ ಜ.27ರ ಬೆಳಗ್ಗೆ ಮದುವೆ ನಡೆದಿದೆ. ಸಂಜೆ ಬೆಂಗಾಲಿ ಸಂಪ್ರದಾಯದ ಪ್ರಕಾರ ವಿವಾಹ ಶಾಸ್ತ್ರಗಳು ನೆರವೇರಲಿವೆ. ಮದುವೆಯ ಫೋಟೋ ಕಂಡು ಫ್ಯಾನ್ಸ್ ಖುಷಿಯಾಗಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಈ ಮದುವೆಗೆ ಎಲ್ಲರನ್ನೂ ಆಹ್ವಾನಿಸಲು ಸಾಧ್ಯವಾಗಿಲ್ಲ. ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದೆ. ಕಿರುತೆರೆ ಮತ್ತು ಸಿನಿಮಾ ಕ್ಷೇತ್ರದ ಆಪ್ತರು ಈ ಮದುವೆಗೆ ಸಾಕ್ಷಿ ಆಗಿದ್ದಾರೆ.

ಹಿಂದಿ ಕಿರುತೆರೆಯಲ್ಲಿ ಮೌನಿ ರಾಯ್ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಕ್ಯೂಂ ಕಿ ಸಾಸ್ ಭಿ ಕಭಿ ಬಹು ಥಿ, ನಾಗಿನ್ ಮುಂತಾದ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಅವರು ಮನೆ ಮಾತಾಗಿದ್ದಾರೆ.