
ನಟಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋಗಳು ವೈರಲ್ ಆಗಿವೆ.

ರಾಗಿಣಿ ಅವರು ಸ್ವಿಮ್ಮಿಂಗ್ ಪೂಲ್ನಲ್ಲಿ ಸಮಯ ಕಳೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ನೀವು ಸಖತ್ ಹಾಟ್. ಬಹುಶಃ ಸ್ವಿಮ್ಮಿಂಗ್ ಪೂಲ್ ನೀರು ಬಿಸಿ ಆಗಿರಬಹುದು’ ಎಂದು ಕೆಲವರು ಬರೆದುಕೊಂಡಿದ್ದಾರೆ.

ರಾಗಿಣಿ ದ್ವಿವೇದಿ ಜೀವನದಲ್ಲಿ ಸಾಕಷ್ಟು ಏರಿಳಿತಗಳು ಉಂಟಾಗಿವೆ. ಇದೆಲ್ಲವನ್ನೂ ಮರೆತು ಅವರು ಮುಂದೆ ಸಾಗುತ್ತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ.

ರಾಗಿಣಿ ದ್ವಿವೇದಿ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳ ಮೂಲಕವೂ ಅವರು ಗಮನ ಸೆಳೆಯುತ್ತಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಅವರು ನಿತ್ಯವೂ ಯೋಗ ಮಾಡುತ್ತಾರೆ. ಅವರಿಗೆ ಯೋಗದ ಬಗ್ಗೆ ವಿಶೇಷ ಪ್ರೀತಿ ಇದೆ. ಯೋಗ ಮಾಡುತ್ತಿರುವ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ರಾಗಿಣಿ ಹಂಚಿಕೊಳ್ಳುವ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಸಿಗುತ್ತದೆ. ರಾಗಿಣಿ ಅಭಿಮಾನಿಗಳ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.
Published On - 9:10 am, Mon, 14 August 23