ಬ್ರೇಕ್ ಪಡೆದು ನ್ಯೂಯಾರ್ಕ್ ಸಿಟಿಗೆ ತೆರಳಿದ ನಟಿ ಸಮಂತಾ; ಇಲ್ಲಿವೆ ಫೋಟೋಸ್

Updated on: Aug 21, 2023 | 9:33 AM

ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ನ್ಯೂಯಾರ್ಕ್​ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

1 / 7
ನಟಿ ಸಮಂತಾ ರುತ್ ಪ್ರಭು ಅವರು Myositis ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯಿಂದ ಗುಣಮುಖರಾಗಲು ಅವರಿಗೆ ಇನ್ನೂ ಸಾಕಷ್ಟು ಸಮಯ ಬೇಕಿದೆ. ಈಗ ಸಮಂತಾ ಅವರು ನಟನೆಯಿಂದ ಬ್ರೇಕ್ ಪಡೆದ ನ್ಯೂಯಾರ್ಕ್​ಗೆ ತೆರಳಿದ್ದಾರೆ.

ನಟಿ ಸಮಂತಾ ರುತ್ ಪ್ರಭು ಅವರು Myositis ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯಿಂದ ಗುಣಮುಖರಾಗಲು ಅವರಿಗೆ ಇನ್ನೂ ಸಾಕಷ್ಟು ಸಮಯ ಬೇಕಿದೆ. ಈಗ ಸಮಂತಾ ಅವರು ನಟನೆಯಿಂದ ಬ್ರೇಕ್ ಪಡೆದ ನ್ಯೂಯಾರ್ಕ್​ಗೆ ತೆರಳಿದ್ದಾರೆ.

2 / 7

ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ನ್ಯೂಯಾರ್ಕ್​ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ.

3 / 7

ಸಮಂತಾ ನ್ಯೂಯಾರ್ಕ್ ಸಿಟಿಯ ಫೋಟೋ ಹಂಚಿಕೊಂಡಿದ್ದಾರೆ. ತಲೆ ಎತ್ತಿರುವ ದೊಡ್ಡ ದೊಡ್ಡ ಕಟ್ಟಡಗಳು ಹೇಗಿವೆ ಎಂಬುದನ್ನು ಈ ಫೋಟೋದಲ್ಲಿ ತೋರಿಸಿದ್ದಾರೆ. ಇದರ ಜೊತೆಗೆ ತಮ್ಮ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ.

4 / 7

ಅಮೆರಿಕದಲ್ಲಿ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಸಖತ್ ಫೇಮಸ್. ಈ ಪ್ರತಿಮೆ ಎದರು ಎನೇಕರು ಫೋಟೋ ಕ್ಲಿಕ್ಕಿಸಿಕೊಂಡು ಪೋಸ್ಟ್ ಮಾಡುತ್ತಾರೆ. ಸಮಂತಾ ಕೂಡ ಹಾಗೆಯೇ ಮಾಡಿದ್ದಾರೆ. ಈ ಪ್ರತಿಮೆಯ ಎದುರು ಅವರು ಪೋಸ್ ಕೊಟ್ಟಿದ್ದಾರೆ.

5 / 7

ನ್ಯೂಯಾರ್ಕ್​ಗೆ ತೆರಳಿದರೂ ಅವರು ವರ್ಕೌಟ್ ಮಾಡೋದನ್ನು ನಿಲ್ಲಿಸಿಲ್ಲ. ಜಿಮ್​ನಲ್ಲಿರುವ ಫೋಟೋಗಳನ್ನು ಸಮಂತಾ ಪೋಸ್ಟ್ ಮಾಡಿಕೊಂಡಿದ್ದಾರೆ. ಫಿಟ್ನೆಸ್ ಕಡೆ ಸಮಂತಾ ಅವರು ಹೆಚ್ಚು ಒತ್ತು ನೀಡುತ್ತಾರೆ.

6 / 7

ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸಗಳನ್ನು ಅವರು ಪೂರ್ಣಗೊಳಿಸಿದ್ದಾರೆ. ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯ ನಡೆಯುತ್ತಿದೆ.

7 / 7

ಇತ್ತೀಚೆಗೆ ನಡೆದ ‘ಖುಷಿ’ ಈವೆಂಟ್ ಒಂದರಲ್ಲಿ ಸಮಂತಾ ಭಾಗಿ ಆಗಿದ್ದರು. ಅವರು ಇನ್ಮುಂದೆ ‘ಖುಷಿ’ ಪ್ರಚಾರ ಕಾರ್ಯದಲ್ಲಿ ಭಾಗಿ ಆಗುವುದಿಲ್ಲ. ಸಿನಿಮಾ ರಿಲೀಸ್ ವೇಳೆ ಅವರು ಅಮೆರಿಕದಲ್ಲೇ ಇರಲಿದ್ದಾರೆ.

Published On - 9:32 am, Mon, 21 August 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us