
ನಟಿ ಸಮಂತಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದರ ಜತೆಗೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಅವರು ‘ಶಾಕುಂತಲಂ’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ಸಮಂತಾ ಅವರು ಶಾಂಕುತಲೆಯಾಗಿ ಕಾಣಿಸಿಕೊಂಡಿದ್ದಾರೆ. ‘ಶಾಕುಂತಲಂ’ ಸಿನಿಮಾ ಫೆಬ್ರವರಿ 17ರಂದು ರಿಲೀಸ್ ಆಗುತ್ತಿದೆ.

ಅದ್ದೂರಿ ಬಜೆಟ್ನಲ್ಲಿ ‘ಶಾಕುಂತಲಂ’ ಸಿನಿಮಾ ಮೂಡಿಬಂದಿದೆ. ಬೃಹತ್ ಸೆಟ್ಗಳು ಗಮನ ಸೆಳೆದಿವೆ. ಅದೇ ರೀತಿ ಶಾಕುಂತಲೆಯಾಗಿ ಸಮಂತಾ ಇಷ್ಟವಾಗುತ್ತಾರೆ.

ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಲುಕ್ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

‘ಶಾಕುಂತಲಂ’ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ.