ನಟಿ ಸಮಂತಾ ಅವರು ಸದ್ಯ ಅಮೆರಿಕದಲ್ಲಿದ್ದಾರೆ. ನ್ಯೂಯಾರ್ಕ್ಗೆ ತೆರಳಿರುವ ಬಗ್ಗೆ ಅವರು ಇತ್ತೀಚೆಗೆ ಮಾಹಿತಿ ಹಂಚಿಕೊಂಡಿದ್ದರು. ವಿವಿಧ ಬಗೆಯ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಾ ಇದ್ದಾರೆ. ಈಗ ಅವರು ಸೀರೆ ಉಟ್ಟು ಮಿಂಚಿದ್ದಾರೆ.
ಸಮಂತಾ ಅವರು ಅಮೆರಿಕದಲ್ಲಿ ಸೀರೆ ಉಟ್ಟು ಮಿಂಚಿದ್ದಾರೆ. ನ್ಯೂಯಾರ್ಕ್ ನಗರದ ಬೀದಿಗಳಲ್ಲಿ ಸೀರೆಯಲ್ಲಿ ಸುತ್ತಾಡಿದ್ದಾರೆ. ಈ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಸಂಯುಕ್ತಾ ಹೆಗ್ಡೆ ಸೇರಿ ಅನೇಕ ಸೆಲೆಬ್ರಿಟಿಗಳು ಕಮೆಂಟ್ ಮಾಡಿದ್ದಾರೆ.
ಸಮಂತಾಗೆ Myositis ಹೆಸರಿನ ಸಮಸ್ಯೆ ಕಾಣಿಸಿಕೊಂಡಿದೆ. ಈ ಬಗ್ಗೆ ಅವರು ಓಪನ್ ಆಗಿ ಮಾತನಾಡಿದ್ದಾರೆ. ಈ ಕಾಯಿಲೆಗೆ ಚಿಕಿತ್ಸೆ ಪಡೆಯಲು ಅವರ ಅಮೆರಿಕ ತೆರಳಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಅವರು ಅಧಿಕೃತವಾಗಿ ಹೇಳಿಕೊಂಡಿಲ್ಲ.
ಸಮಂತಾ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದಿದ್ದಾರೆ. ಅವರು ಒಂದು ವರ್ಷ ನಟನೆಗೆ ಮರಳುವುದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಇದನ್ನು ಅವರು ನೇರವಾಗಿ ಹೇಳಿಕೊಂಡಿಲ್ಲ. ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.
ಇಂಗ್ಲಿಷ್ ‘ಸಿಟಾಡೆಲ್’ನ ಭಾರತದ ವರ್ಷನ್ನಲ್ಲಿ ಸಮಂತಾ ನಟಿಸುತ್ತಿದ್ದಾರೆ. ಈ ವೆಬ್ ಸೀರಿಸ್ನ ಶೂಟಿಂಗ್ ಪೂರ್ಣಗೊಂಡಿದೆ ಎಂದು ತಿಳಿದು ಬಂದಿದೆ. ಈ ಸೀರಿಸ್ ಬಗ್ಗೆ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.
ಸಮಂತಾ ಬಗ್ಗೆ ಹುಟ್ಟಿಕೊಂಡಿರುವ ವದಂತಿಗಳು ಒಂದೆರಡಲ್ಲ. ಕೆಲ ವದಂತಿಗಳಿಗೆ ಸಮಂತಾ ಅವರು ನೇರವಾಗಿ ಸ್ಪಷ್ಟನೆ ನೀಡುವ ಕೆಲಸ ಮಾಡುತ್ತಾರೆ. ಈ ಬಗ್ಗೆ ಅಭಿಮಾನಿಗಳಿಗೆ ಖುಷಿ ಇದೆ.
ಸಮಂತಾ ಅವರು ಸದ್ಯಕ್ಕಂತೂ ಹೊಸ ಸಿನಿಮಾ ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ ಇದೆ. ಅವರು Myositis ಕಾಯಿಲೆಯಿಂದ ಸಂಪೂರ್ಣವಾಗಿ ಗುಣಮುಖರಾಗಿ ಮರಳಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.