- TV9 Kannada Photo gallery Actress Sharmiela Mandrae gets engaged to producer Sudhan Sundaram photos viral
ನಿಶ್ಚಿತಾರ್ಥ ಮಾಡಿಕೊಂಡ ನಟಿ ಶರ್ಮಿಳಾ ಮಾಂಡ್ರೆ; ಇಲ್ಲಿವೆ ಸುಂದರ ಫೋಟೋಗಳು
ನಿರ್ಮಾಪಕ ಸುಧನ್ ಸುಂದರಂ ಜೊತೆ ನಟಿ ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥ ನೆರವೇರಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭದ ಕಲರ್ಫುಲ್ ಫೋಟೋಗಳು ಇಲ್ಲಿವೆ. ಮದುವೆಯ ದಿನಾಂಕ ಮತ್ತು ಸ್ಥಳದ ಬಗ್ಗೆ ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಅದ್ದೂರಿ ವಿವಾಹಕ್ಕೆ ತಯಾರಿ ಮಾಡಿಕೊಳ್ಳಲಾಗುತ್ತಿದೆ.
Updated on: Jun 28, 2026 | 11:51 AM

ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಶುಭ ಸಂದರ್ಭದ ಫೋಟೋಗಳನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ತಮಿಳು ಚಿತ್ರರಂಗದಲ್ಲಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಸುಧನ್ ಸುಂದರಂ ಜೊತೆ ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥ ನೆರವೇರಿದೆ. ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸಿದ್ದಾರೆ.

ಬೆಂಗಳೂರಿನ ಸ್ಟಾರ್ ಹೋಟೆಲ್ನಲ್ಲಿ ಎಂಗೇಜ್ಮೆಂಟ್ ಮಾಡಲಾಗಿದೆ. ಕುಟುಂಬದವರು ಮತ್ತು ಕೆಲವೇ ಮಂದಿ ಸ್ನೇಹಿತರು ಈ ಕ್ಷಣಕ್ಕೆ ಸಾಕ್ಷಿಯಾದರು. ಫೋಟೋಗಳು ಈಗ ಸಖತ್ ವೈರಲ್ ಆಗುತ್ತಿವೆ.

ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸುತ್ತಿರುವ ಬಗ್ಗೆ ಶರ್ಮಿಳಾ ಮಾಂಡ್ರೆ ಅವರು ಕೆಲವೇ ದಿನಗಳ ಹಿಂದೆ ಮಾಹಿತಿ ಹಂಚಿಕೊಂಡಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡು ಮದುವೆಗೆ ಸಜ್ಜಾಗಿದ್ದಾರೆ.

ಶರ್ಮಿಳಾ ಮಾಂಡ್ರೆ ಅವರ ಮದುವೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ವಿವಾಹದ ಸ್ಥಳ ಮತ್ತು ದಿನಾಂಕದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಡೆಸ್ಟಿನೇಷನ್ ವೆಡ್ಡಿಂಗ್ಗೆ ಈ ಜೋಡಿ ಪ್ಲ್ಯಾನ್ ಮಾಡುತ್ತಿದೆ.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More



