‘ಪುಷ್ಪ 2’ ಚಿತ್ರದ ವಿಶೇಷ ಹಾಡಿನ ಫೋಟೋ ಲೀಕ್; ಶ್ರೀಲೀಲಾ ವಯ್ಯಾರ ನೋಡಿ
‘ಪುಷ್ಪ’ ಚಿತ್ರದಲ್ಲಿ ನಟಿ ಸಮಂತಾ ಅವರು ಭರ್ಜರಿ ಹೆಜ್ಜೆ ಹಾಕಿದ್ದರು. ‘ಹೂ ಅಂತೀಯಾ ಮಾವ..’ ಎಂದು ಐಟಂ ಸಾಂಗ್ನಲ್ಲಿ ಕಾಣಿಸಿಕೊಂಡಿದ್ದರು. ಈಗ ‘ಪುಷ್ಪ 2’ ಚಿತ್ರಕ್ಕೆ ನಟಿ ಶ್ರೀಲೀಲಾ ಅವರ ಎಂಟ್ರಿ ಆಗಿದ್ದು, ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
Updated on:Nov 09, 2024 | 11:44 AM

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಚಿತ್ರದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ಗೆ ನಿರೀಕ್ಷೆ ಇದೆ. ಈ ಚಿತ್ರದ ರಿಲೀಸ್ಗೆ ಇನ್ನು ಒಂದು ತಿಂಗಳವೂ ಬಾಕಿ ಉಳಿದಿಲ್ಲ. ಹೀಗಿರುವಾಗಲೇ ಸಿನಿಮಾ ಬಗ್ಗೆ ಭರ್ಜರಿ ಅಪ್ಡೇಟ್ ಸಿಕ್ಕಿದೆ.

‘ಪುಷ್ಪ’ ಚಿತ್ರದಲ್ಲಿ ನಟಿ ಸಮಂತಾ ಅವರು ಭರ್ಜರಿ ಹೆಜ್ಜೆ ಹಾಕಿದ್ದರು. ‘ಹೂ ಅಂತೀಯಾ ಮಾವ..’ ಎಂದು ಐಟಂ ಸಾಂಗ್ನಲ್ಲಿ ಕಾಣಿಸಿಕೊಂಡಿದ್ದರು. ಈಗ ‘ಪುಷ್ಪ 2’ ಚಿತ್ರಕ್ಕೆ ನಟಿ ಶ್ರೀಲೀಲಾ ಅವರ ಎಂಟ್ರಿ ಆಗಿದ್ದು, ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಸದ್ಯ ‘ಪುಷ್ಪ 2’ ಚಿತ್ರದ ವಿಶೇಷ ಸಾಂಗ್ನ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿವೆ. ಈ ಫೋಟೋ ಫ್ಯಾನ್ಸ್ ಗಮನ ಸೆಳೆದಿದೆ. ಶ್ರೀಲೀಲಾ ಲುಕ್ ಸಾಕಷ್ಟು ಗಮನ ಸೆಳೆದಿದೆ.

ಶ್ರೀಲೀಲಾ ಅವರ ವಯ್ಯಾರ ನೋಡಿ ಫ್ಯಾನ್ಸ್ ಮರಳಾಗಿದ್ದಾರೆ. ಸದ್ಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೂರಲ್ ಆಗುತ್ತಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುವ ಕೆಲಸ ಮಾಡುತ್ತಿದ್ದಾರೆ.

ಶ್ರೀಲೀಲಾ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಟಾಲಿವುಡ್ನಲ್ಲಿ ಅವರ ಅಭಿಮಾನಿ ಬಳಗ ದೊಡ್ಡದಿದೆ. ಕನ್ನಡದವರಾದರೂ ಅವರಿಗೆ ಪರಭಾಷೆಯಲ್ಲಿಯೂ ಬೇಡಿಕೆ ಸೃಷ್ಟಿ ಆಗಿದೆ.
Published On - 11:42 am, Sat, 9 November 24