ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಒಂದೊಳ್ಳೆಯ ಪಾತ್ರ ಮಾಡಿದ ಖುಷಿಯಲ್ಲಿ ಅದಾ ಶರ್ಮಾ ಇದ್ದಾರೆ.
ಇಂದು (ಮೇ 11) ಅದಾ ಶರ್ಮಾ ಅವರ ಬರ್ತ್ಡೇ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಬರ್ತ್ಡೇ ಸಂದರ್ಭದಲ್ಲೇ ‘ದಿ ಕೇರಳ ಸ್ಟೋರಿ’ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿರುವುದು ಅವರ ಖುಷಿಯನ್ನು ಹೆಚ್ಚಿಸಿದೆ.
ಅದಾ ಶರ್ಮಾಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಬೋಲ್ಡ್ ಹಾಗೂ ಕ್ಯೂಟ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.
ಅದಾ ಶರ್ಮಾ ಅವರು 2008ರಲ್ಲಿ ರಿಲೀಸ್ ಆದ ‘1920’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರಿಗೆ ಹಲವು ಆಫರ್ಗಳು ಬಂದವು.
ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ಜೊತೆ ‘ರಣ ವಿಕ್ರಮ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ನಟಿಸಿದ ಏಕೈಕ ಸಿನಿಮಾ ಇದು.