Adah Sharma: ‘ಮೊದಲು ಸಿನಿಮಾ ನೋಡಿ, ಆಮೇಲೆ ಮಾತಾಡಿ’: ‘ದಿ ಕೇರಳ ಸ್ಟೋರಿ’ ವಿವಾದಕ್ಕೆ ಅದಾ ಶರ್ಮಾ ಪ್ರತಿಕ್ರಿಯೆ

Updated on: May 03, 2023 | 7:15 AM

The Kerala Story: ‘ದಿ ಕೇರಳ ಸ್ಟೋರಿ’ ಸಿನಿಮಾ ಟ್ರೇಲರ್​ನಿಂದ ವಿವಾದ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿರುವ ಅದಾ ಶರ್ಮಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

1 / 5
ಬಹುಭಾಷೆಯಲ್ಲಿ ನಟಿಸಿ ಫೇಮಸ್​ ಆಗಿರುವ ಅದಾ ಶರ್ಮಾ ಅವರು ಈಗ ‘ದಿ ಕೇರಳ ಸ್ಟೋರಿ’ ಚಿತ್ರದ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ.

ಬಹುಭಾಷೆಯಲ್ಲಿ ನಟಿಸಿ ಫೇಮಸ್​ ಆಗಿರುವ ಅದಾ ಶರ್ಮಾ ಅವರು ಈಗ ‘ದಿ ಕೇರಳ ಸ್ಟೋರಿ’ ಚಿತ್ರದ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ.

2 / 5

ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದ ಸೃಷ್ಟಿ ಮಾಡಿದೆ. ಮತಾಂತರದ ಕುರಿತು ಈ ಚಿತ್ರದಲ್ಲಿ ತೋರಿಸಲಾದ ಮಾಹಿತಿ ಸುಳ್ಳು ಎಂದು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅದಾ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.

3 / 5

‘ಉನ್ನತ ಸ್ಥಾನದಲ್ಲಿ ಇರುವ ಕೆಲವು ಹಿರಿಯರು ನಮ್ಮ ಸಿನಿಮಾದ ಟ್ರೇಲರ್​ ನೋಡಿ ಕಮೆಂಟ್​ ಮಾಡಿದ್ದಾರೆ. ಅವರೆಲ್ಲರೂ 2 ಗಂಟೆ ಸಮಯ ಮಾಡಿಕೊಂಡು ನಮ್ಮ ಸಿನಿಮಾ ನೋಡಲಿ. ಕೇರಳವನ್ನು ನಾವು ಕೆಟ್ಟದಾಗಿ ತೋರಿಸಿಲ್ಲ’ ಎಂದು ಅದಾ ಶರ್ಮಾ ಹೇಳಿದ್ದಾರೆ.

4 / 5

ಮೇ 5ರಂದು ‘ದಿ ಕೇರಳ ಸ್ಟೋರಿ’ ಬಿಡುಗಡೆ ಆಗಲಿದೆ. ಒಟ್ಟಾರೆ ಸಿನಿಮಾದಲ್ಲಿ ಏನೆಲ್ಲ ತೋರಿಸಲಾಗಿದೆ ಎಂಬುದು ಅಂದು ತಿಳಿಯಲಿದೆ. ಮತಾಂತರದ ವಿಷಯ ಈ ಚಿತ್ರದಲ್ಲಿ ಇರುವುದರಿಂದ ಸಿಕ್ಕಾಪಟ್ಟೆ ಚರ್ಚೆ ಹುಟ್ಟುಹಾಕಿದೆ.

5 / 5

ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಹಿಂದಿ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us