ಬಾಲಿವುಡ್ ಬೆಡಗಿ ಕೃತಿ ಸನೋನ್ ಅವರು ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದಾರೆ. ಅವರ ನಟನೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಾಕಷ್ಟು ಹಿಟ್ ಚಿತ್ರಗಳಲ್ಲಿ ಕೃತಿ ಸನೋನ್ ಅಭಿನಯಿಸಿದ್ದಾರೆ.
ಅದ್ದೂರಿಯಾಗಿ ಬಿಡುಗಡೆ ಆಗಲಿರುವ ‘ಆದಿಪುರುಷ್’ ಸಿನಿಮಾದಲ್ಲಿ ಕೃತಿ ಸನೋನ್ ಅವರು ಸೀತೆ ಪಾತ್ರ ಮಾಡಿದ್ದಾರೆ. ರಾಮನಾಗಿ ನಟಿಸಿರುವ ಪ್ರಭಾಸ್ ಜೊತೆಯಲ್ಲಿ ಕೃತಿ ಸನೋನ್ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ.
ಈಗ ಕೃತಿ ಸನೋನ್ ಬಗ್ಗೆ ಹೊಸ ಸುದ್ದಿ ಕೇಳಿಬರುತ್ತಿದೆ. ಶೀಘ್ರದಲ್ಲೇ ಅವರು ನಿರ್ಮಾಪಕಿಯಾಗಿ ಬಡ್ತಿ ಪಡೆಯಲಿದ್ದಾರೆ. ಹೊಸ ನಿರ್ದೇಶಕನ ಜೊತೆ ಕೃತಿ ಸನೋನ್ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ನಟಿಯಾಗಿ ಕೃತಿ ಸನೋನ್ಗೆ ಬಾಲಿವುಡ್ನಲ್ಲಿ ಸಖತ್ ಬೇಡಿಕೆ ಇದೆ. ಅವರ ಕಾಲ್ಶೀಟ್ಗಾಗಿ ಅನೇಕ ನಿರ್ಮಾಪಕರು ಕಾದು ಕುಳಿತಿದ್ದಾರೆ. ಸ್ವತಃ ಕೃತಿ ಅವರೇ ಈಗ ನಿರ್ಮಾಪಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.
ನಿರ್ಮಾಣ ಸಂಸ್ಥೆ ಆರಂಭಿಸುವ ಕುರಿತು ಕೃತಿ ಸನೋನ್ ಅವರು ಅಧಿಕೃತವಾಗಿ ಏನನ್ನೂ ಹೇಳಿಕೊಂಡಿಲ್ಲ. ಆದರೂ ಕೂಡ ಬಾಲಿವುಡ್ ಅಂಗಳದಲ್ಲಿ ಹೀಗೊಂದು ಸುದ್ದಿ ಹಬ್ಬಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.