
ಬಹುನಿರೀಕ್ಷಿತ ‘ಆದಿಪುರುಷ್’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಅಯೋಧ್ಯೆಯಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟೀಸರ್ ಅನಾವರಣ ಮಾಡಲಾಗಿದೆ.

ರಾಮಾಯಣದ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಟೀಸರ್ನಲ್ಲಿ ಅವರ ಲುಕ್ ಗಮನ ಸೆಳೆದಿದೆ.

ಪ್ರಭಾಸ್ ಜೊತೆ ಸೀತೆಯಾಗಿ ಕೃತಿ ಸನೋನ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಓಂ ರಾವುತ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ.

ಕನ್ನಡದಲ್ಲೂ ಟೀಸರ್ ಬಿಡುಗಡೆ ಆಗಿದೆ. ಆಧುನಿಕ ಗ್ರಾಫಿಕ್ಸ್ ತಂತ್ರಜ್ಞಾನದಲ್ಲಿ ರಾಮಾಯಣದ ಕಥೆಯನ್ನು ಕಟ್ಟಿಕೊಡುವ ಪ್ರಯತ್ನ ಆಗುತ್ತಿದೆ. 10 ತಲೆ ರಾವಣನಾಗಿ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ.

2023ರ ಜನವರಿ 12ರಂದು ‘ಆದಿಪುರುಷ್’ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗು ತಮಿಳಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಪ್ರಭಾಸ್ ಅವರ ಅಭಿಮಾನಿಗಳು ಟೀಸರ್ ನೋಡಿ ಮೆಚ್ಚಿಕೊಂಡಿದ್ದಾರೆ.