Aditi Prabhudeva: ‘2024 ನಾನು ಅಮ್ಮನಾಗುವೆ’; ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ
2022ರ ನವೆಂಬರ್ 28ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ನ ಗಾಯತ್ರಿ ವಿಹಾರ ಗ್ರ್ಯಾಂಡ್ನಲ್ಲಿ ಅದ್ದೂರಿಯಾಗಿ ಇವರ ವಿವಾಹ ನೆರವೇರಿತ್ತು. ಈಗ ಅದಿತಿ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.
Updated on: Jan 01, 2024 | 11:53 AM

ನಟಿ ಅದಿತಿ ಪ್ರಭುದೇವ ಅವರು 2022ರ ನವೆಂಬರ್ ತಿಂಗಳಲ್ಲಿ ಮದುವೆ ಆಗಿದ್ದರು. ಯಶಸ್ ಜೊತೆ ಅವರ ವಿವಾಹ ನೆರವೇರಿತ್ತು. ಈಗ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಫೋಟೋ ಹಂಚಿಕೊಂಡು ಅವರು ಸಂಭ್ರಮಿಸಿದ್ದಾರೆ.

2022ರ ನವೆಂಬರ್ 28ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ನ ಗಾಯತ್ರಿ ವಿಹಾರ ಗ್ರ್ಯಾಂಡ್ನಲ್ಲಿ ಅದ್ದೂರಿಯಾಗಿ ಇವರ ವಿವಾಹ ನೆರವೇರಿತ್ತು. ಈಗ ಅದಿತಿ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.

‘ಸಂಬಂಧಗಳಲ್ಲಿ ಶ್ರೇಷ್ಠವಾದದ್ದು. ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ ಅಮ್ಮ’ ಎಂದು ಪೋಸ್ಟ್ ಆರಂಭಿಸಿದ್ದಾರೆ ನಟಿ ಅದಿತಿ ಪ್ರಭುದೇವ.

‘ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ ಅಮ್ಮ. ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ ಅಮ್ಮ. 2024ಕ್ಕೆ ನಾನು ಅಮ್ಮನಾಗುವೆ’ ಎಂದು ಪೋಸ್ಟ್ ಹಾಕಿದ್ದಾರೆ ಅವರು.

ಅದಿತಿ ಪ್ರಭುದೇವ ಅವರು ಚಿತ್ರರಂಗದಲ್ಲಿ ಯಶಸ್ಸಿನ ಮೆಟ್ಟಿಲು ಏರುತ್ತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದರ ಜೊತೆಗೆ ತಾಯಿ ಆಗುತ್ತಿದ್ದಾರೆ.

ಜನವರಿ 26ರಂದು ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಮಧ್ಯೆ ಅವರು ಮತ್ತೊಂದು ಖುಷಿ ಸುದ್ದಿ ನೀಡಿದ್ದಾರೆ. ಅವರಿಗೆ ಫ್ಯಾನ್ಸ್ ಶುಭಾಶಯ ತಿಳಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



