Updated on: Dec 27, 2021 | 5:18 PM
ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ. ಈಗ ಅವರ ಕಡೆಯಿಂದ ಗುಡ್ನ್ಯೂಸ್ ಸಿಕ್ಕಿದೆ!
ಅವರು ಸೈಲೆಂಟ್ ಆಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.
ನಿಜಕ್ಕೂ ಅವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.
ಭಾನುವಾರ (ಡಿಸೆಂಬರ್ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ.
ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.