ಸಿಎಂ ಭೇಟಿಯಾದ ವಿವಿಧ ಸಮುದಾಯದ ಸ್ವಾಮೀಜಿಗಳು: ಬೇಷರತ್ ನೈತಿಕ ಬೆಂಬಲ ಘೋಷಣೆ

|

Updated on: Aug 25, 2024 | 4:30 PM

ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಸಂಬಂಧ ಸಿಎಂ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿವೆ. ಇದರ ಮಧ್ಯ ಇದೀಗ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯದ ಸ್ವಾಮೀಜಿಗಳ ನಿಯೋ ಅಖಾಡಕ್ಕಿಳಿದಿದ್ದು, ಸಿಎಂಗೆ ಬೆನ್ನಿಗೆ ನಿಂತಿದೆ. ಅಲ್ಲದೇ ಸ್ವಾಮೀಜಿಗಳ ನಿಯೋಗ ಸಿಎಂಗೆ ಬೇಷರತ್ ನೈತಿಕ ಬೆಂಬಲ ಘೋಷಿಸಿದೆ.

1 / 6
ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯದ ಸ್ವಾಮೀಜಿಗಳ ನಿಯೋಗ ಇಂದು (ಆಗಸ್ಟ್​ 25) ಕಾವೇರಿ ನಿವಾಸಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. ಈ ಮೂಲಕ ಸ್ವಾಮೀಜಿಗಳ ನಿಯೋಗ ಸಿಎಂಗೆ ಬೇಷರತ್ ನೈತಿಕ ಬೆಂಬಲ ಘೋಷಿಸಿತು.

2 / 6
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ಸ್ವಾಮೀಜಿಗಳು, ತೀವ್ರವಾಗಿ ಖಂಡಿಸಿದ್ದು,  ಷಡ್ಯಂತ್ರದ ವಿರುದ್ಧ ಒಕ್ಕೊರಲಿನಿಂದ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದದರು.

3 / 6
ಸಂಪುಟದ ಸಚಿವರು, ಶಾಸಕರು ಸೇರಿದಂತೆ ಹೈಕಮಾಂಡ್​ ನಾಯಕರು ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದೆ. ಈಗ ಹಿಂದೂಳಿದ ವರ್ಗಗಳ ಸ್ವಾಮೀಜಿಗಳು ಸಹ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ನಿಮ್ಮ ಹಿಂದೆ ನಾವಿದ್ದೇವೆ ಎನ್ನುವ ಸಂದೇಶ ರವಾನಿಸಿದ್ದಾರೆ.

4 / 6
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾನಿಕ್ಯೂಷನ್​ಗೆ ರಾಜ್ಯಪಾಲರು ಅನಿಮತಿ ನೀಡಿದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ. ಕೆಲವರು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಸಿಎಂ ಪರವಾಗಿ ನಿಂತು ರಾಜ್ಯಪಾಲರ ನಡೆಯನ್ನು ಖಂಡಿಸಿ ಸಿಎಂ ಬೆನ್ನಿಗೆ ನಿಂತಿದ್ದಾರೆ. ಈಗ ಸ್ವಾಮೀಜಿಗಳು ಸಹ ಸಿಎಂ ಪರವಾಗಿ ಅಖಾಡಕ್ಕಿಳಿಸಿದ್ದಾರೆ.

5 / 6
ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು ಕನಕ ಪೀಠ ಕಾಗಿನೆಲೆ, ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ , ಜಗದ್ಗುರು ಶ್ರೀ ಹಿಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು ಭೋವಿ ಗುರುಪೀಠ ಚಿತ್ರದುರ್ಗ , ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಮಾದರ ಚನ್ನಯ ಗುರುಪೀಠ ಚಿತ್ರದುರ್ಗ  , ಭಗಿರಥ ಪೀಠ ಮಧುರೆ  ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ನಿಯೋಗದದ್ದರು.

6 / 6
ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು ಕನಕ ಗುರುಪೀಠ ಹೊಸದುರ್ಗ , ಶ್ರೀ ರೇಣುಕಾನಂದ ಸ್ವಾಮಿಗಳು ನಾರಾಯಣ ಗುರುಪೀಠ ಶಿವಮೊಗ್ಗ , ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಮಡಿವಾಳ ಗುರುಪೀಠ ಚಿತ್ರದುರ್ಗ, ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ, ಸರೂರು ವಿಜಯನಗರ ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು ಸೇರಿದಂತೆ ಇತರೆ ಸ್ವಾಮೀಜಿಗಳು ಸಿಎಂ ಭೇಟಿಯಾದರು.