ಹನಿಟ್ರ್ಯಾಪ್​​ ಕೋಲಾಹಲ ಬೆನ್ನಲ್ಲೇ ಸಿದ್ದರಾಮಯ್ಯ ಭೇಟಿಯಾದ ಖರ್ಗೆ, ಮಹತ್ವದ ಚರ್ಚೆ!

Updated on: Mar 23, 2025 | 1:44 PM

ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಭಾರೀ ಸದ್ದು ಮಾಡುತ್ತಿದ್ದು, ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇನ್ನು ಈ ಹನಿಟ್ರ್ಯಾಪ್​ ಯತ್ನದ ವಿರುದ್ಧ ರಾಜಣ್ಣ ಸಮರ ಸಾರಿದ್ದು, ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆದುಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ಹೈಕಮಾಂಡ್​ಗೆ ದೂರು ನೀಡಲು ಸಹ ತೀರ್ಮಾನಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದಿಢೀರ್​​ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಇದು ಕಾಂಗ್ರಸ್​​​ನಲ್ಲಿ ಸಂಚಲನ ಮೂಡಿಸಿದೆ.

1 / 7
ತಮ್ಮ ಮೇಲೆ ಹನಿಟ್ರ್ಯಾಪ್‌ ಪ್ರಯತ್ನ ನಡೆದಿದೆ ಎಂದು ಸಚಿವ ಕೆಎನ್​ ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದೆ. ಈ ಸಂಬಂಧ ಕಾಂಗ್ರೆಸ್​ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದರ ಮಧ್ಯೆ ಖುದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.

ತಮ್ಮ ಮೇಲೆ ಹನಿಟ್ರ್ಯಾಪ್‌ ಪ್ರಯತ್ನ ನಡೆದಿದೆ ಎಂದು ಸಚಿವ ಕೆಎನ್​ ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದೆ. ಈ ಸಂಬಂಧ ಕಾಂಗ್ರೆಸ್​ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದರ ಮಧ್ಯೆ ಖುದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.

2 / 7

ಇಂದು (ಮಾರ್ಚ್​ 23) ಬೆಂಗಳೂರಿನ ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. ಹನಿಟ್ರ್ಯಾಪ್ ಬಿರುಗಾಳಿ ಬೆನ್ನಲ್ಲೇ ಸ್ವತಃ ಖರ್ಗೆ ಅವರೇ ಬಂದು ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

3 / 7

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ. ಅಲ್ಲದೇ ಇದೇ ನೆಪದಲ್ಲಿ ರಾಜಣ್ಣ ಅವರ ಹನಿಟ್ರ್ಯಾಪ್​ ಆರೋಪದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

4 / 7

ದೇಶಾದ್ಯಂತ ಸದ್ದು ಮಾಡಿರುವ ಹನಿಟ್ರಾಪ್‌ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ದೂರವಾಣಿ ಮೂಲಕ ಮಾಹಿತಿ ಪಡೆದಿದೆ. ಆದರೂ ಸಹ ಎಐಸಿಸಿ ಅಧ್ಯಕ್ಷರು ಸಿಎಂ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಬಂದು ಹನಿಟ್ರ್ಯಾಪ್​ ಬಗ್ಗೆ ಸುದೀರ್ಘವಾಗಿ 45 ಮಿಮಿಷಗಳ ಮಹತ್ವದ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

5 / 7

ಇನ್ನು ಮಲ್ಲಿಕಾರ್ಜ ಖರ್ಗೆ ಹಾಗೂ ಸಿದ್ದರಾಮಯ್ಯನವರ ಚರ್ಚೆ ವೇಳೆ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದು, ಉಭಯ ನಾಯಕರು ಬರೋಬ್ಬರಿ 45 ನಿಮಿಷಗಳ ಕಾಲ ಮಹತ್ವದ ಮಾತುಕತೆ ಮಾಡಿದ್ದಾರೆ.

6 / 7

ಸಾಮಾನ್ಯ. ಹಲವು ರಾಜಕೀಯ ವಿಚಾರಗಳು ಚರ್ಚೆ ಆಗಿರುತ್ತೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಹನಿಟ್ರ್ಯಾಪ್​ ಬಗ್ಗೆಯೂ ಸಹ ಚರ್ಚೆ ನಡೆದಿದೆ ಎನ್ನುವುದನ್ನು ಪ್ರಿಯಾಂಕ್ ಕರ್ಗೆ ಅವರು ಪರೋಕ್ಷವಾಗಿ ಖಚಿತಪಡಿಸಿದಂತಾಗಿದೆ.

7 / 7

ತಮ್ಮ ಮೇಲೆ ಹನಿಟ್ರ್ಯಾಪ್‌ ಪ್ರಯತ್ನ ನಡೆದಿದೆ ಎಂದು ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದರು. ಈ ವಿಚಾರವನ್ನೇ ಮುಂದಿಟ್ಟುಕೊಂಡು ಬಿಜೆಪಿ ಶಾಸಕರು ಶುಕ್ರವಾರ ಸದನದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಲ್ಲದೆ, ಹನಿಟ್ರ್ಯಾಪ್‌ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ವಹಿಸುವಂತೆ ಹೈಡ್ರಾಮಾ ಸೃಷ್ಟಿಸಿದ್ದರು. ಈ ವಿಚಾರವನ್ನು ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತಂತೆ ಶುಕ್ರವಾರ ಸಂಜೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

Loading...
Unable to load recommendations.
Follow Us