ಐಶ್ವರ್ಯಾ ರೈ ನಟನೆಯ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಹತ್ತು ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ ಕೂಡ ನಟಿಸುತ್ತಿದ್ದಾರೆ.
ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಸೆಟ್ನ ಫೋಟೋ ವೈರಲ್ ಆಗಿದೆ.
ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್ ಸೆಲ್ವನ್’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.
ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.
ಐಶ್ವರ್ಯಾ ರೈ ಅವರು ಸದ್ಯ ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ.