
ಇದೇ ಮೊದಲ ಬಾರಿಗೆ ನಟ ಅಕ್ಷಯ್ ಕುಮಾರ್ ಅವರು ಮರಾಠಿ ಸಿನಿಮಾ ಮಾಡುತ್ತಿದ್ದಾರೆ. ಆ ಮೂಲಕ ಅಭಿಮಾನಿಗಳಲ್ಲಿ ಅವರು ನಿರೀಕ್ಷೆ ಹುಟ್ಟುಹಾಕಿದ್ದಾರೆ. ಈ ಚಿತ್ರದ ಶೂಟಿಂಗ್ ಆರಂಭ ಆಗಿದೆ.

ಅಕ್ಷಯ್ ಕುಮಾರ್ ನಟನೆಯ ಮರಾಠಿ ಸಿನಿಮಾಗೆ ‘ವೇಡಾತ್ ಮರಾಠೆ ವೀರ್ ದೌಡಲೇ ಸಾಥ್’ ಎಂದು ಹೆಸರು ಇಡಲಾಗಿದೆ. ಅವರ ವೃತ್ತಿಜೀವನದಲ್ಲಿ ಇದು ಡಿಫರೆಂಟ್ ಸಿನಿಮಾ ಆಗಲಿದೆ. ಅದಕ್ಕಾಗಿ ಸಾಕಷ್ಟು ಕಾಳಜಿ ವಹಿಸುತ್ತಿದ್ದಾರೆ.

ಈಗಾಗಲೇ ಹಲವಾರು ಪಾತ್ರಗಳನ್ನು ಮಾಡಿರುವ ಅಕ್ಷಯ್ ಕುಮಾರ್ ಅವರು ಈ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಹಾಗಾಗಿ ಈ ಚಿತ್ರ ವಿಶೇಷವಾಗಿರಲಿದೆ. ಮಹೇಶ್ ಮಂಜ್ರೇಕರ್ ನಿರ್ದೇಶನ ಮಾಡುತ್ತಿದ್ದಾರೆ.

‘ವೇಡಾತ್ ಮರಾಠೆ ವೀರ್ ದೌಡಲೇ ಸಾಥ್’ ಸಿನಿಮಾದ ಶೂಟಿಂಗ್ ಮಂಗಳವಾರ (ಡಿ.6) ಶುರುವಾಗಿದೆ. ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಶಿವಾಜಿ ಮಹಾರಾಜ್ ಗೆಟಪ್ನಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

‘ಈ ಪಾತ್ರ ಸಿಕ್ಕಿರುವುದು ನನ್ನ ಸೌಭಾಗ್ಯ. ಶಿವಾಜಿ ಮಹಾರಾಜ್ ಅವರ ಜೀವನದಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ನಿಮ್ಮ ಶುಭ ಹಾರೈಕೆ ಇರಲಿ’ ಎಂದು ಅಕ್ಷಯ್ ಕುಮಾರ್