ನಟಿ ಆಲಿಯಾ ಭಟ್ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಅವರು ಅನೇಕ ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಆಗಿದ್ದಾರೆ. ಹಾಗಾಗಿ ಮದುವೆ ನಂತರ ಹೆಚ್ಚು ದಿನ ಅವರು ಬಿಡುವು ಪಡೆದುಕೊಂಡಿಲ್ಲ. ವಿವಾಹ ಆಗಿ 5 ದಿನ ಕಳೆಯುವುದರೊಳಗೆ ಆಲಿಯಾ ಶೂಟಿಂಗ್ಗೆ ಮರಳಿದ್ದಾರೆ.
1 / 5
ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್. ಕಳೆದ 5 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಅವರು ಏ.14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನವದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.
2 / 5
ಬಾಲಿವುಡ್ನಲ್ಲಿ ಆಲಿಯಾ ಭಟ್ ಅವರು ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ‘ರಾಜಿ’, ‘ಗಲ್ಲಿ ಬಾಯ್’, ‘ಗಂಗೂಬಾಯಿ ಕಾಠಿಯಾವಾಡಿ’ ಮುಂತಾದ ಸಿನಿಮಾಗಳ ಮೂಲಕ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಪಡಿಸಿದ್ದಾರೆ.
3 / 5
ಈಗ ರಣವೀರ್ ಸಿಂಗ್ ಜೊತೆ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್ ನಟಿಸುತ್ತಿದ್ದಾರೆ. ಆ ಚಿತ್ರದ ಶೂಟಿಂಗ್ನಲ್ಲಿ ಭಾಗಿ ಆಗುವ ಸಲುವಾಗಿ ಅವರು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಮುಂಬೈ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡ ಅವರ ಫೋಟೋಗಳು ವೈರಲ್ ಆಗಿವೆ.
4 / 5
ಅತ್ತ ರಣಬೀರ್ ಕಪೂರ್ ಕೂಡ ಸಿನಿಮಾ ಶೂಟಿಂಗ್ಗೆ ಮರಳಿದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಜೊತೆಯಾಗಿ ನಟಿಸಿದ್ದಾರೆ. ಆ ಸಿನಿಮಾ ಮೂರು ಪಾರ್ಟ್ಗಳಲ್ಲಿ ಮೂಡಿಬರಲಿದೆ. ಅವರಿಬ್ಬರ ಕಾಂಬಿನೇಷನ್ ಬಗ್ಗೆ ನಿರೀಕ್ಷೆ ಹೆಚ್ಚಿದೆ.