
ನಟ ಅಲ್ಲು ಅರ್ಜುನ್ಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಲಭಿಸಿದೆ.

ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದ ಮೊತ್ತ ಮೊದಲ ನಟ ಅಲ್ಲು ಅರ್ಜುನ್

ಪತ್ನಿ ಸ್ನೇಹಾ ರೆಡ್ಡಿ ಜೊತೆ ಸೇರಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ತೆರಳಿದ್ದಾರೆ.

ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಪ್ರಶಸ್ತಿ ಸ್ವೀಕರಿಸಲು ಅಲ್ಲು ಅರ್ಜುನ್ ಹಾಗೂ ಸ್ನೇಹ ರೆಡ್ಡಿ ವಿಮಾನ ನಿಲ್ದಾಣದಿಂದ ತೆರಳಿದ್ದಾರೆ.

ಅಕ್ಟೋಬರ್ 17ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ರಾಷ್ಟ್ರಪತಿಗಳು ಪ್ರಶಸ್ತಿ ನೀಡಲಿದ್ದಾರೆ.

ಅಲ್ಲು ಅರ್ಜುನ್ಗೆ 'ಪುಷ್ಪ' ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರಕಿದೆ.

'ಪುಷ್ಪ 2' ಸಿನಿಮಾಕ್ಕೆ ಅಲ್ಲು ಅರ್ಜುನ್ ತಯಾರಾಗುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ.