Allu Arjun: ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿದ ಅಲ್ಲು ಅರ್ಜುನ್; ಇಲ್ಲಿವೆ ಫೋಟೋಗಳು
ಇಂದು (ಫೆ.3) ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಖಾಸಗಿ ವಿಮಾನದಲ್ಲಿ ಹೈದರಾಬಾದ್ನಿಂದ ಹೊರಟಿದ್ದರು. 12 ಗಂಟೆಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಶಿವರಾಜ್ಕುಮಾರ್ ನಿವಾಸಕ್ಕೆ ತೆರಳಿ ನಂತರ ಅಲ್ಲಿಂದ ಪುನೀತ್ ರಾಜ್ಕುಮಾರ್ ಮನೆಗೆ ಅಲ್ಲು ಅರ್ಜುನ್ ಭೇಟಿ ನೀಡಲಿದ್ದಾರೆ
Updated on:Feb 03, 2022 | 1:33 PM

ಹೃದಯಾಘಾತದಿಂದ ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಕೂಡ ಅವರು ಸ್ನೇಹಿತರನ್ನು ಸಂಪಾದಿಸಿದ್ದರು. ಪುನೀತ್ ನಿಧನದ ಬಳಿಕ ಅಕ್ಕಪಕ್ಕದ ರಾಜ್ಯಗಳ ಅನೇಕ ಸೆಲೆಬ್ರಿಟಿಗಳು ಬಂದು ಡಾ. ರಾಜ್ಕುಮಾರ್ ಕುಟುಂಬಕ್ಕೆ ಸಾಂತ್ವನವನ್ನು ಹೇಳಿದರು.

ತಾವು ಪುನೀತ್ ಮನೆಗೆ ಭೇಟಿ ನೀಡುವುದಾಗಿ ಅಲ್ಲು ಅರ್ಜುನ್ ಈ ಮೊದಲೇ ತಿಳಿಸಿದ್ದರು. ಅದರಂತೆ ಈಗ ನಡೆದುಕೊಳ್ಳುತ್ತಿದ್ದಾರೆ. ಪುನೀತ್ ನಿಧನರಾದ ಸಂದರ್ಭದಲ್ಲಿ ಅಲ್ಲು ಅರ್ಜುನ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಹೈದರಾಬಾದ್ನಲ್ಲಿ ನಡೆದ ಸಿನಿಮಾವೊಂದರ ಪ್ರಚಾರ ಕಾರ್ಯದ ವೇಳೆ ಮೌನಾಚರಣೆ ಮಾಡುವ ಮೂಲಕ ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದರು. ಈಗ ಅವರು ಬೆಂಗಳೂರಿಗೆ ಬಂದು ಪುನೀತ್ ಕುಟುಂಬದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ.

ಅಲ್ಲು ಅರ್ಜುನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಖಾಸಗಿ ವಿಮಾನದಲ್ಲಿ ಹೈದರಾಬಾದ್ನಿಂದ ಹೊರಟಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಎಚ್ಎಎಲ್ ತಲುಪಲಿದ್ದಾರೆ. ಆ ಬಳಿ ಶಿವರಾಜ್ಕುಮಾರ್ ಹಾಗೂ ಗೀತಾ ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಹಲವು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಡಾ. ರಾಜ್ ಕುಟುಂಬದವರಿಗೆ ಎಲ್ಲ ಭಾಷೆಯ ಸೆಲೆಬ್ರಿಟಿಗಳ ನಡುವೆ ಉತ್ತಮ ಬಾಂಧವ್ಯ ಇದೆ. ಪುನೀತ್ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

ಪುಷ್ಪ’ ಚಿತ್ರದ ಪ್ರಚಾರದ ಸಮಯದಲ್ಲಿ ಅಲ್ಲು ಅರ್ಜುನ್ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪುನೀತ್ ನಿವಾಸಕ್ಕೆ ಭೇಟಿ ನೀಡದಿರಲು ಅವರು ನಿರ್ಧರಿಸಿದ್ದರು. ಅದಕ್ಕೆ ಕಾರಣ ಏನೆಂಬುದನ್ನೂ ಅವರು ವಿವರಿಸಿದ್ದರು. ‘
Published On - 1:33 pm, Thu, 3 February 22



















