- Kannada News Photo gallery Allu Arjun starrer Pushpa 2 movie teaser likely to be released on 8th April
Allu Arjun: ‘ಪುಷ್ಪ 2’ ಚಿತ್ರದ ಅಪ್ಡೇಟ್ ತಿಳಿಯಲು ಕಾದಿರುವವರಿಗೆ ಸಿಹಿ ಸುದ್ದಿ; ಏಪ್ರಿಲ್ 8ಕ್ಕೆ ಬರಲಿದೆ ಟೀಸರ್
Pushpa 2 Movie First Glimpse: ಏಪ್ರಿಲ್ 8ರಂದು ಅಲ್ಲು ಅರ್ಜುನ್ ಜನ್ಮದಿನ. ಆ ವಿಶೇಷ ದಿನದಂದು ನಿರ್ದೇಶಕ ಸುಕುಮಾರ್ ಅವರು ನಿರಾಸೆ ಮಾಡುವುದಿಲ್ಲ ಎಂಬುದು ಹಲವರ ನಂಬಿಕೆ.
Updated on: Feb 28, 2023 | 8:40 PM

ನಟ ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಅಪ್ಡೇಟ್ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.

‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಗಿದ್ದರಿಂದ ಅದರ ಸೀಕ್ವೆಲ್ ಮೇಲೆ ನಿರೀಕ್ಷೆ ಜೋರಾಗಿದೆ. ಎರಡನೇ ಪಾರ್ಟ್ಗೆ ಶೂಟಿಂಗ್ ನಡೆಯುತ್ತಿದೆ. ಆದಷ್ಟು ಬೇಗ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಪ್ರಯತ್ನಿಸುತ್ತಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ 8ರಂದು ‘ಪುಷ್ಪ 2’ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೂ ಗಾಸಿಪ್ ಬಲವಾಗಿ ಹಬ್ಬಿದೆ.

ಏಪ್ರಿಲ್ 8ರಂದು ಅಲ್ಲು ಅರ್ಜುನ್ ಜನ್ಮದಿನ. ಆ ವಿಶೇಷ ದಿನದಂದು ಖಂಡಿತವಾಗಿಯೂ ನಿರ್ದೇಶಕ ಸುಕುಮಾರ್ ಅವರು ಅಭಿಮಾನಿಗಳಿಗೆ ನಿರಾಸೆ ಮಾಡುವುದಿಲ್ಲ ಎಂಬುದು ಹಲವರ ನಂಬಿಕೆ. ಹಾಗಾಗಿ ಆ ದಿನಾಂಕದ ಮೇಲೆ ಕಣ್ಣಿಡಲಾಗಿದೆ.

ದೊಡ್ಡ ಕ್ಯಾನ್ವಾಸ್ನಲ್ಲಿ ‘ಪುಷ್ಪ 2’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್, ಫಹಾದ್ ಫಾಸಿಲ್ ಮುಂತಾದ ಜನಪ್ರಿಯ ಕಲಾವಿದರು ಅಭಿನಯಿಸುತ್ತಿದ್ದಾರೆ.




