Allu Arjun: ‘ಪುಷ್ಪ 2’ ಚಿತ್ರದ ಅಪ್​ಡೇಟ್​ ತಿಳಿಯಲು ಕಾದಿರುವವರಿಗೆ ಸಿಹಿ ಸುದ್ದಿ​; ಏಪ್ರಿಲ್​ 8ಕ್ಕೆ ಬರಲಿದೆ ಟೀಸರ್​

Updated on: Feb 28, 2023 | 8:40 PM

Pushpa 2 Movie First Glimpse: ಏಪ್ರಿಲ್​ 8ರಂದು ಅಲ್ಲು ಅರ್ಜುನ್​ ಜನ್ಮದಿನ. ಆ ವಿಶೇಷ ದಿನದಂದು ನಿರ್ದೇಶಕ ಸುಕುಮಾರ್​ ಅವರು ನಿರಾಸೆ ಮಾಡುವುದಿಲ್ಲ ಎಂಬುದು ಹಲವರ ನಂಬಿಕೆ.

1 / 5
ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.

ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.

2 / 5

‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಗಿದ್ದರಿಂದ ಅದರ ಸೀಕ್ವೆಲ್​ ಮೇಲೆ ನಿರೀಕ್ಷೆ ಜೋರಾಗಿದೆ. ಎರಡನೇ ಪಾರ್ಟ್​ಗೆ ಶೂಟಿಂಗ್​ ನಡೆಯುತ್ತಿದೆ. ಆದಷ್ಟು ಬೇಗ ಟೀಸರ್​ ಬಿಡುಗಡೆ ಮಾಡಲು ಚಿತ್ರತಂಡ ಪ್ರಯತ್ನಿಸುತ್ತಿದೆ.

3 / 5

ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್​ 8ರಂದು ‘ಪುಷ್ಪ 2’ ಚಿತ್ರದ ಟೀಸರ್​ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೂ ಗಾಸಿಪ್​ ಬಲವಾಗಿ ಹಬ್ಬಿದೆ.

4 / 5

ಏಪ್ರಿಲ್​ 8ರಂದು ಅಲ್ಲು ಅರ್ಜುನ್​ ಜನ್ಮದಿನ. ಆ ವಿಶೇಷ ದಿನದಂದು ಖಂಡಿತವಾಗಿಯೂ ನಿರ್ದೇಶಕ ಸುಕುಮಾರ್​ ಅವರು ಅಭಿಮಾನಿಗಳಿಗೆ ನಿರಾಸೆ ಮಾಡುವುದಿಲ್ಲ ಎಂಬುದು ಹಲವರ ನಂಬಿಕೆ. ಹಾಗಾಗಿ ಆ ದಿನಾಂಕದ ಮೇಲೆ ಕಣ್ಣಿಡಲಾಗಿದೆ.

5 / 5

ದೊಡ್ಡ ಕ್ಯಾನ್ವಾಸ್​ನಲ್ಲಿ ‘ಪುಷ್ಪ 2’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಜೊತೆಗೆ ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಜನಪ್ರಿಯ ಕಲಾವಿದರು ಅಭಿನಯಿಸುತ್ತಿದ್ದಾರೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us