Aman Sehrawat: ಒಲಿಂಪಿಕ್ಸ್​ನಲ್ಲಿ ಹೊಸ ಇತಿಹಾಸ ಬರೆದ ಅಮನ್ ಸೆಹ್ರಾವತ್

AMAN SEHRAWAT: ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಭಾರತಕ್ಕೆ ಆರನೇ ಪದಕ ತಂದುಕೊಟ್ಟಿದ್ದಾರೆ. 57 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಡೇರಿಯನ್ ಟೊಯಿ ಕ್ರೂಜ್ ಅವರನ್ನು ಮಣಿಸುವ ಮೂಲಕ ಅಮನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ ಅತ್ಯಂತ ಕಿರಿಯ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

|

Updated on: Aug 10, 2024 | 8:22 AM

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ (Aman Sehrawat) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ತಮ್ಮ 21ನೇ ವಯಸ್ಸಿನಲ್ಲಿ ಕಂಚಿನ ಪದಕಕ್ಕೆ ಕೊರೊಳೊಡ್ಡುವ ಮೂಲಕ ಎಂಬುದು ವಿಶೇಷ.

1 / 6
ಶುಕ್ರವಾರ ಚಾಂಪ್ ಡಿ ಅರೆನಾದಲ್ಲಿ ನಡೆದ 57 ಕೆ.ಜಿ ಫ್ರೀ ಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಅಮನ್ ಸೆಹ್ರಾವತ್ ಹಾಗೂ ಪೋರ್ಟೊ ರಿಕೊದ ಡೇರಿಯನ್ ಟೊಯಿ ಕ್ರೂಜ್ ಮುಖಾಮುಖಿಯಾಗಿದ್ದರು. ಕಂಚಿನ ಪದಕ್ಕಾಗಿ ನಡೆದ ಈ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡು ಬಂದರೂ ಅಂತಿಮವಾಗಿ 13-5 ಪಾಯಿಂಟ್ಸ್​ಗಳ ಅಂತರದಿಂದ ಗೆಲ್ಲುವಲ್ಲಿ ಅಮನ್ ಯಶಸ್ವಿಯಾದರು.

2 / 6
ಈ ಗೆಲುವಿನೊಂದಿಗೆ ಅಮನ್ ಸೆಹ್ರಾವತ್ ಕಂಚಿನ ಪದಕಕ್ಕೆ ಕೊರೊಳೊಡ್ಡಿದ್ದರು. ವಿಶೇಷ ಎಂದರೆ ಈ ಪದಕದೊಂದಿಗೆ ಒಲಿಂಪಿಕ್ಸ್ ಇತಿಹಾಸದಲ್ಲೇ ಭಾರತಕ್ಕೆ ಪದಕ ಗೆದ್ದುಕೊಟ್ಟ ಅತ್ಯಂತ ಕಿರಿಯ ಕ್ರೀಡಾಳು ಎಂಬ ದಾಖಲೆಯೊಂದು ಅಮನ್ ಹೆಸರಿಗೆ ಸೇರ್ಪಡೆಯಾಯಿತು.

3 / 6
ಇದಕ್ಕೂ ಮುನ್ನ ಈ ದಾಖಲೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರ ಹೆಸರಿನಲ್ಲಿತ್ತು. 2016ರ ರಿಯೋ ಒಲಿಂಪಿಕ್ಸ್​ನಲ್ಲಿ 21 ವರ್ಷದ (1 ತಿಂಗಳು, 14 ದಿನಗಳು) ಸಿಂಧು ಬೆಳ್ಳಿ ಪದಕ ಗೆದ್ದು ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯುವ ಕುಸ್ತಿ ಪಟು ಯಶಸ್ವಿಯಾಗಿದ್ದಾರೆ.

4 / 6
ಪ್ಯಾರಿಸ್ ಒಲಿಂಪಿಕ್ಸ್​ ಮೂಲಕ ಚೊಚ್ಚಲ ಬಾರಿಗೆ ಒಲಿಂಪಿಕ್ಸ್ ಅಂಗಳಕ್ಕೆ ಪ್ರವೇಶಿಸಿರುವ ಅಮನ್ ಸೆಹ್ರಾವತ್ 21 ವರ್ಷ, 24 ದಿನಗಳ ವಯಸ್ಸಿನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪರ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಅತ್ಯಂತ ಕಿರಿಯ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

5 / 6
ಹಾಗೆಯೇ ಒಲಿಂಪಿಕ್ಸ್ ಇತಿಹಾಸದಲ್ಲಿ ಪದಕ ಗೆದ್ದ ಅತ್ಯಂತ ಕಿರಿಯ ಭಾರತೀಯ ಕುಸ್ತಿಪಟು ಎಂಬ ಹೆಗ್ಗಳಿಕೆಗೂ ಅಮನ್ ಸೆಹ್ರಾವತ್ ಪಾತ್ರರಾಗಿದ್ದಾರೆ. ಈ ಮೂಲಕ ಮೊದಲ ಒಲಿಂಪಿಕ್ಸ್​ನಲ್ಲೇ ಭಾರತದ ಕೀರ್ತಿ ಪಾತಾಕೆಯನ್ನು ಮುಗಿಲೆತ್ತರಕ್ಕೇರಿಸಿರುವ ಅಮನ್ ಕಡೆಯಿಂದ ಮುಂಬರುವ ದಿನಗಳಲ್ಲಿ ಮತ್ತಷ್ಟು ಪದಕಗಳನ್ನು ನಿರೀಕ್ಷಿಸಬಹುದಾಗಿದೆ.

6 / 6
Follow us
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ

ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ

ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು

ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ

ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ

ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ

‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು