OnePlus 10R 5G: ಭರ್ಜರಿ ಸೇಲ್ ಕಂಡ ಒನ್​ಪ್ಲಸ್ 10R 5G ಫೋನ್ ಈಗ ಬಂಪರ್ ಡಿಸ್ಕೌಂಟ್​ನಲ್ಲಿ ಲಭ್ಯ: ಆಫರ್ ಮಿಸ್ ಮಾಡ್ಬೇಡಿ

Amazon Great Indian Festival: ಜನಪ್ರಿಯ ಬ್ರ್ಯಾಂಡ್‌ಗಳಾದ ಟೆಕ್ನೋ, ಒನ್​ಪ್ಲಸ್, ಆ್ಯಪಲ್, ಐಕ್ಯೂ ಮತ್ತು ಶವೋಮಿ ಕಂಪನಿಯ ಸ್ಮಾರ್ಟ್‌ಫೋನ್‌ಗಳು ಡಿಸ್ಕೌಂಟ್‌ ಪಡೆದುಕೊಂಡಿವೆ. ಮುಖ್ಯವಾಗಿ ಒನ್​ಪ್ಲಸ್ 10R ಸ್ಮಾರ್ಟ್​ಫೋನ್ ಅತ್ಯುತ್ತಮ ಆಫರ್ ಪಡೆದುಕೊಂಡಿದೆ.

| Updated By: Vinay Bhat

Updated on:Oct 16, 2022 | 2:38 PM

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2022 (Amazon Great Indian Festival Sale) ಮುಂದುವರೆದಿದ್ದು ಕೆಲ ಪ್ರಾಡಕ್ಟ್​ಗಳಿಗೆ ಆಕರ್ಷಕ ಡಿಸ್ಕೌಂಟ್ ನೀಡಲಾಗಿದೆ. ಗ್ರಾಹಕರು ಕ್ರೆಡಿಟ್ ಕಾರ್ಡ್‌ಗಳು, ಡೆಬಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಹೆಚ್ಚು ರಿಯಾಯಿತಿ ಕೂಡ ಪಡೆಯಬಹುದಾಗಿದೆ.

1 / 7
ಜನಪ್ರಿಯ ಬ್ರ್ಯಾಂಡ್‌ಗಳಾದ ಟೆಕ್ನೋ, ಒನ್​ಪ್ಲಸ್, ಆ್ಯಪಲ್, ಐಕ್ಯೂ ಮತ್ತು ಶವೋಮಿ ಕಂಪನಿಯ ಸ್ಮಾರ್ಟ್‌ಫೋನ್‌ಗಳು ಡಿಸ್ಕೌಂಟ್‌ ಪಡೆದುಕೊಂಡಿವೆ. ಮುಖ್ಯವಾಗಿ ಒನ್​ಪ್ಲಸ್ 10R ಸ್ಮಾರ್ಟ್​ಫೋನ್ ಅತ್ಯುತ್ತಮ ಆಫರ್ ಪಡೆದುಕೊಂಡಿದೆ.

2 / 7
ಅಮೆಜಾನ್​ನಲ್ಲಿ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಆಕರ್ಷಕ ಡಿಸ್ಕೌಂಟ್​ನಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ 38,999 ರೂ. ಬೆಲೆಯ ಈ ಫೋನನ್ನು 32,999 ರೂ. ಗೆ ನಿಮ್ಮದಾಗಿಸಬಹುದು. ಐಸಿಐಸಿಐ ಬ್ಯಾಂಕ್ ಮಾರ್ಡ್ ಮೂಲಕ ಖರೀದಿಸಿದರೆ ಪುನಃ 2,000 ರೂ. ಗಳ ರಿಯಾಯಿತಿ ಪಡೆಯಬಹುದು.

3 / 7
ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ 1,080*2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

4 / 7
ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ನೀಡಲಾಗಿದ್ದು ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಪ್ರೊಸೆಸರ್‌ 20% ಸುಧಾರಿತ GPU ಕಾರ್ಯಕ್ಷಮತೆ, 25% ಸುಧಾರಿತ ವಿದ್ಯುತ್ ದಕ್ಷತೆ ಮತ್ತು 80% ಉತ್ತಮ AI ಕಾರ್ಯಕ್ಷಮತೆಯನ್ನು ನೀಡುತ್ತದೆ.

5 / 7
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೋನಿ IMX 355 ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ GC02M1 ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದರಲ್ಲಿ ಅತ್ಯುತ್ತಮ ಕ್ಯಾಮೆರಾ ಕ್ವಾಲಿಟಿ ನೀಡಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5K3P9 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ.

6 / 7
ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇನ್ನು 80W SuperVOOC ವೇಗದ ಚಾರ್ಜಿಂಗ್ ಹೊಂದಿರುವ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

7 / 7

Published On - 2:37 pm, Sun, 16 October 22

Follow us