- Kannada News Photo gallery Amazon has a great deal a huge price drop available on iQOO Neo 7 Pro 5G phone
ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಇಂದೇ ಖರೀದಿಸಿ
iQOO Neo 7 Pro 5G Price Cut on Amazon: ಗೇಮಿಂಗ್ ಪ್ರಿಯರಿಗೆ ಹೇಳಿ ಮಾಡಿಸಿದಂತಿರುವ ಐಕ್ಯೂ ನಿಯೋ 7 ಪ್ರೊ 5G ಫೋನ್ ಮೇಲೆ ಬಂಪರ್ ಡಿಸ್ಕೌಂಟ್ ಘೋಷಿಸಲಾಗಿದೆ. ಇದೀಗ ಅಮೆಜಾನ್ನಲ್ಲಿ ಶೇ. 13 ರಷ್ಟು ರಿಯಾಯಿತಿಯನ್ನು ಪಡೆದುಕೊಂಡಿದೆ. ಇದರ ಜೊತೆಗೆ ವಿನಿಮಯ ಕೊಡುಗೆಗಳ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
Updated on: Aug 24, 2023 | 1:02 PM

ನೀವು ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಖರೀದಿಸಲು ಯೋಜಿಸುತ್ತಿದ್ದೀರಾ? ಅಮೆಜಾನ್ ನಿಮಗಾಗಿ ಭರ್ಜರಿ ಆಫರ್ ಒಂದನ್ನು ಹೊರತಂದಿದೆ. ಕಳೆದ ತಿಂಗಳು ಭಾರತದಲ್ಲಿ ಬಿಡುಗಡೆ ಆದ ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಮಧ್ಯಮ ಬೆಲೆಗೆ ಒಳ್ಳೆಯ ಪ್ರೀಮಿಯಂ ಅನುಭವ ನೀಡುವ ಫೋನ್ ಬೇಕಿದ್ದರೆ ಇದು ಅತ್ಯುತ್ತಮ ಆಯ್ಕೆ ಆಗಿದೆ.

ಗೇಮಿಂಗ್ ಪ್ರಿಯರಿಗೆ ಈ ಫೋನ್ ಹೇಳಿ ಮಾಡಿಸಿದಂತಿದ್ದು, ಸ್ನಾಪ್‌ಡ್ರಾಗನ್ 8+ ಜೆನ್ 1 ಪ್ರೊಸೆಸರ್ ಅಳವಡಿಸಲಾಗಿದೆ. ನಿಯೋ 7 ಪ್ರೊ ಕಳೆದ ವರ್ಷ ಬಿಡುಗಡೆ ಆಗಿ ಸದ್ದು ಮಾಡಿದ್ದ ಐಕ್ಯೂ ನಿಯೋ 7 ಸರಣಿಯ ಮುಂದುವರೆದ ಭಾಗವಾಗಿದೆ. ಹಾಗಾದರೆ ಈ ಫೋನಿನ ಬೆಲೆ ಈಗ ಎಷ್ಟು?, ಏನೆಲ್ಲ ಪೀಚರ್ಸ್ ಇದೆ? ಎಂಬುದನ್ನು ನೋಡೋಣ.

ಐಕ್ಯೂ ನಿಯೋ 7 ಪ್ರೊ 8GB RAM + 12GB ಸ್ಟೋರೇಜ್ ಆಯ್ಕೆಗಯ ಮೂಲಬೆಲೆ 39,999 ರೂ. ಇತ್ತು. ಇದೀಗ ಅಮೆಜಾನ್ನಲ್ಲಿ ಶೇ. 13 ರಷ್ಟು ರಿಯಾಯಿತಿಯನ್ನು ಪಡೆದುಕೊಂಡಿದೆ. ಈ ಮೂಲಕ ಕೇವಲ 34999 ರೂ. ಗೆ ನಿಮ್ಮದಾಗಿಸಿಕೊಳ್ಳಬಹುದು. ಇನ್ನಷ್ಟು ಕಡಿಮೆ ಮಾಡಲು ಬಯಸಿದರೆ, ನೀವು ವಿನಿಮಯ ಕೊಡುಗೆಗಳ ಪ್ರಯೋಜನಗಳನ್ನು ತೆಗೆದುಕೊಳ್ಳಬಹುದು.

ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್ 2400×1080 ಪಿಕ್ಸೆಲ್ ರೆಸಲೂಷನ್ ಸಾಮರ್ಥ್ಯದ 6.78 ಇಂಚಿನ ಅಮೋಲೆಡ್ ಡಿಸ್‌ಪ್ಲೇ ನೀಡಲಾಗಿದ್ದು, 120Hz ರಿಫ್ರೆಶ್ ರೇಟ್ ಹೊಂದಿದೆ. ಇದರಿಂದ ಸ್ಮಾರ್ಟ್‌ಫೋನ್ ಡಿಸ್ ಪ್ಲೇ ನಯವಾಗಿ ಇರಲಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್ 1 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಇದು ಗೇಮಿಂಗ್ಗೆ ಹೇಳಿ ಮಾಡಿಸಿದ್ದಾಗಿದೆ. ಆಂಡ್ರಾಯ್ಡ್ 13 ಒಎಸ್ ನೀಡಲಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿ ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾವನ್ನು ಹೊಂದಿದೆ. 8 ಮೆಗಾ ಪಿಕ್ಸೆಲ್ನ ವೈಡ್-ಆ್ಯಂಗಲ್ ಲೆನ್ಸ್ ಮತ್ತು ಎರಡು ಮೆಗಾ ಪಿಕ್ಸೆಲ್ನ ಮಾಕ್ರೊ ಲೆನ್ಸ್ ಅಳವಡಿಸಲಾಗಿದೆ.

ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾ ಪಿಕ್ಸೆಲ್ನ ಹೈ-ಕ್ವಾಲಿಟಿ ಲೆನ್ಸ್ ನೀಡಲಾಗಿದೆ. ಕ್ಯಾಮೆರಾದಲ್ಲಿ ಸ್ಪೋರ್ಟ್ಸ್, ನೈಟ್, ಪೋಟ್ರೆಟ್ ಸೇರಿದಂತೆ ಫೋಟೋಗ್ರಫಿಗಾಗಿ ಅನೇಕ ಆಯ್ಕೆ ಸೇರಿಸಲಾಗಿದೆ. ಇದು ಫಿಯರ್ಲೆಸ್ ಫ್ಲೇಮ್ ಮತ್ತು ಡಾರ್ಕ್ ಸ್ಟೋರ್ಮ್ ಎರಡು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAhಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ. ಕಂಪನಿ ಹೇಳಿರುವ ಪ್ರಕಾರ ಇದು ಶೇ. 1 ರಿಂದ ಶೇ. 100 ರಷ್ಟು ಚಾರ್ಜ್ ಕೇವಲ 25 ನಿಮಿಷಗಳಲ್ಲಿ ಆಗುತ್ತಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ.

ಉಳಿದಂತೆ 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ನೀಡಲಾಗಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.
























