- Kannada News Photo gallery Amazon India is again selling the Apple iPhone 13 at a discounted price of Rs 70900
iPhone 13: ಐಫೋನ್ ಖರೀದಿಗೆ ಇದೇ ಬೆಸ್ಟ್ ಟೈಮ್: ಐಫೋನ್ 13 ಮೇಲೆ ಬಂಪರ್ ಡಿಸ್ಕೌಂಟ್ ಘೋಷಣೆ
iPhone 13 Discount: ಇದೀಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ನಲ್ಲಿ ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆದ ಐಫೋನ್ 13 ಸ್ಮಾರ್ಟ್ ಫೋನ್ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡಲಾಗಿದೆ.
Updated on: Aug 23, 2022 | 3:09 PM

ಆ್ಯಪಲ್ ಕಂಪನಿಯ ಐಫೋನ್ ಹೊಸ ಸರಣಿ ಐಫೋನ್ 14 ಬಿಡುಗಡೆ ಕಾರ್ಯಕ್ರಮ ಸದ್ಯದಲ್ಲೇ ನಡೆಯಲಿದೆ. ದೀಪಾವಳಿ ಸಮಯಕ್ಕೆ ಭಾರತದಲ್ಲಿ ಐಫೋನ್ 14 ಸರಣಿ ಅನಾವರಣಗೊಳ್ಳಲಿದೆ ಎಂಬ ಮಾಹಿತಿಯಿದೆ. ಹೀಗಿರುವಾಗ ಐಫೋನ್ ತನ್ನ ಹಳೆಯ ಮಾಡೆಲ್ ಗಳ ಸ್ಮಾರ್ಟ್ ಫೋನ್ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. ದುಬಾರಿ ಬೆಲೆಯ ಆ್ಯಪಲ್ ಐಫೋನ್ ಖರೀದಿಸ ಬೇಕು ಎಂಬವರಿಗೆ ಇದು ಅತ್ಯುತ್ತಮ ಸಮಯ ಎನ್ನಬಹುದು.

ಇದೀಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ನಲ್ಲಿ ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆದ ಐಫೋನ್ 13 ಸ್ಮಾರ್ಟ್ ಫೋನ್ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡಲಾಗಿದೆ. ಕ್ಯಾಮೆರಾ ಪ್ರಿಯರನ್ನು ದಂಗಾಗಿಸಿದ ಈ ಫೋನ್ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ.

ಐಫೋನ್ 13ನ 12GB RAM ಆಯ್ಕೆಯ ಫೋನ್ ಈಗ ಕೇವಲ 70,900 ರೂ. ಗೆ ಖರೀದಿಸಬಹುದು. ಇದರ ಮೂಲ ಬೆಲೆ 79,900 ರೂ. ಆಗಿದೆ. ಆಫರ್ ನಲ್ಲಿ ನೀವು ಬರೋಬ್ಬರಿ 9,000 ರೂ. ಗಳ ಆಕರ್ಷಕ ಡಿಸ್ಕೌಂಟ್ ಪಡೆಯಬಹುದು.

ಈ ಫೋನ್ 6.1 ಇಂಚಿನ ಡಿಸ್ ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಡಿಸ್ ಪ್ಲೇ 60Hz ರಿಫ್ರೆಶ್ ರೇಟ್ ಹೊಂದಿದ್ದು, 1200 ನಿಟ್ಸ್ ಬ್ರೈಟ್‌ನೆಸ್ ನಿಂದ ಕೂಡಿದೆ. ಹಾಗೆಯೇ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ.

ಕ್ಯಾಮೆರಾಕ್ಕೆ ಫೇಮಸ್ ಆಗಿರುವ ಐಫೋನ್ 13 ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ.

ಐಫೋನ್ 13 ಐಆರ್ ಆಧಾರಿತ ಫೇಸ್ ಐಡಿಯನ್ನು ಹೊಂದಿದೆ ಮತ್ತು ಮಿಂಚಿನ ಕೇಬಲ್ ಮೂಲಕ ಚಾರ್ಜ್ ಮಾಡುವ ದೊಡ್ಡ ಬ್ಯಾಟರಿಯೊಂದಿಗೆ ಬರುತ್ತದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೋ ಸೆರೆಹಿಡಿಯಲು ನೆರವಾಗಲಿದೆ. ಇವುಗಳ ಜೊತೆಗೆ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿರುವುದು ವಿಶೇಷ.




