Photos: ಅಮಿತ್​ ಶಾಗೆ ಉಪಹಾರ ಬಡಿಸಿದ ಬಿವೈ ವಿಜಯೇಂದ್ರ, ಟಿಫನ್​ ನೆಪದಲ್ಲಿ ಮಹತ್ವದ ರಾಜಕೀಯ ಚರ್ಚೆ

|

Updated on: Mar 24, 2023 | 1:12 PM

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಪಹಾರ ಕೂಟದಲ್ಲಿ ರಾಜ್ಯ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ನಡೆದ ಉಪಹಾರಕೂಟದ ವೇಳೆ ಶಾ, ರಾಜ್ಯ ರಾಜಕೀಯ ಪರಿಸ್ಥಿತಿ ಬಗ್ಗೆ ನಾಯಕರೊಂದಿಗೆ ಚರ್ಚೆ ಮಾಡಿದ್ದಾರೆ.

1 / 8
ಕೇಂದ್ರ ಸಚಿವ ಅಮಿತ್ ಶಾಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನಿವಾಸದಲ್ಲಿ ಉಪಹಾಕೂಟ

2 / 8
ಅಮಿತ್​ ಶಾಗೆ ಇಡ್ಲಿ, ದೋಸೆ, ಪೊಂಗಲ್​, ಉಪ್ಪಿಟ್ಟು, ರಸ್ ಮಲಾಯ್ ಖಾದ್ಯಗಳನ್ನು ಸಿದ್ಧ ಪಡಿಸಲಾಗಿತ್ತು.

3 / 8
ಉಪಾಹಾರ ಕೂಟದಲ್ಲಿ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​​ ಕಟೀಲ್​, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ ಪಾಲ್ಗೊಂಡಿದ್ದರು.

4 / 8
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಅಮಿತ್​ ಶಾಗೆ  ಉಪಹಾರ ಬಡಿಸಿ ಗಮನ ಸೆಳೆದರು.

5 / 8
ಈ ವೇಳೆ ಪ್ರಸ್ತುತ ಸ್ಥಿತಿಗತಿಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದು, ಮತ್ತೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಣತಂತ್ರದ ಬಗ್ಗೆ ಮಾತುಕತೆ ನಡೆಯಿತು,

6 / 8
ಈ ವೇಳೆ ಶಾ ಬಿಎಸ್​ವೈಗಿಂತ ಅವರ ಪುತ್ರ ವಿಜಯೇಂದ್ರಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

7 / 8
ಟಿಫನ್​ಗೆ ಅಂತ ಬಂದ ಅಮಿತ್ ಶಾ ಬಿಎಸ್​ ಯಡಿಯೂರಪ್ಪನ ಕೈಯಲ್ಲಿದ್ದ ಹೂಗುಚ್ಛ ವಿಜಯೇಂದ್ರನಿಗೆ ನೀಡುವಂತೆ ಹೇಳಿದರು

8 / 8
ಅಮಿತ್ ಶಾ ಯಡಿಯೂರಪ್ಪಗಿಂತ ವಿಜಯೇಂದ್ರಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ಕುತೂಹಲ ಮೂಡಿಸಿದೆ.