
ರಶ್ಮಿಕಾ ಮಂದಣ್ಣ ನಟನೆಯ ‘ಗುಡ್ಬೈ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಂದು ಈ ಚಿತ್ರ ರಿಲೀಸ್ ಆಗಲಿದೆ. ಆ ದಿನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

‘ಗುಡ್ಬೈ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಸಿಂಪಲ್ ಹುಡುಗಿಯ ಪಾತ್ರ ಸಿಕ್ಕಿದೆ. ಗ್ಲಾಮರ್ ಬದಿಗಿಟ್ಟು ನಟನೆಗೆ ಮಹತ್ವ ನೀಡುವ ಚಾನ್ಸ್ ಈ ಸಿನಿಮಾದಲ್ಲಿ ಅವರಿಗೆ ದೊರೆತಿದೆ. ಅವರ ಲುಕ್ ಗಮನ ಸೆಳೆಯುತ್ತಿದೆ.

ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಜೊತೆ ಅನೇಕ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಅಮಿತಾಭ್ ಬಚ್ಚನ್, ನೀನಾ ಗುಪ್ತಾ ಅವರಂತಹ ಅನುಭವಿ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಪಾತ್ರವರ್ಗದ ಕಾರಣದಿಂದ ಚಿತ್ರದ ಹೈಪ್ ಹೆಚ್ಚಿದೆ.

ಖ್ಯಾತ ನಿರ್ದೇಶಕ ವಿಕಾಸ್ ಬಹ್ಲ್ ಅವರ ಬತ್ತಳಿಕೆಯಿಂದ ‘ಗುಡ್ಬೈ’ ಸಿನಿಮಾ ಮೂಡಿಬಂದಿದೆ. ಅಮಿತಾಭ್ ಬಚ್ಚನ್ ಮತ್ತು ರಶ್ಮಿಕಾ ಮಂದಣ್ಣ ಅವರು ತಂದೆ-ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಟ್ರೇಲರ್ ಮೂಲಕ ‘ಗುಡ್ಬೈ’ ಚಿತ್ರ ಗಮನ ಸೆಳೆಯುತ್ತಿದೆ. ಸಿನಿಮಾದ ಕಥೆಯ ಎಳೆ ಏನು ಎಂಬುದನ್ನು ಇದರಲ್ಲಿ ಬಿಟ್ಟುಕೊಡಲಾಗಿದೆ. ಈ ಟ್ರೇಲರ್ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.