Updated on: Aug 19, 2022 | 7:16 PM
ನಟಿ ಅಮೂಲ್ಯ ಅವರಿಗೆ ಕಳೆದ ಕೆಲ ತಿಂಗಳ ಹಿಂದೆ ಅವಳಿ ಮಕ್ಕಳು ಜನಿಸಿದ್ದವು. ಮಗುವಿನ ಮುಖ ತೋರಿಸಿ ಎಂಬ ಒತ್ತಾಯ ಅಭಿಮಾನಿಗಳ ಕಡೆಯಿಂದ ಬಂದಿತ್ತು. ಆದರೆ, ನಟಿ ಅಮೂಲ್ಯ ಅವರು ಮಕ್ಕಳ ಫೋಟೋ ಹಂಚಿಕೊಂಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಅವಳಿ ಮಕ್ಕಳ ಮುಖವನ್ನು ರಿವೀಲ್ ಮಾಡಿದ್ದಾರೆ.
ರೀಲ್ಸ್ ಮೂಲಕ ಮಕ್ಕಳ ಮುಖವನ್ನು ಫ್ಯಾನ್ಸ್ಗೆ ತೋರಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಪ್ರೀತಿಯ ಕಮೆಂಟ್ಗಳು ಬರುತ್ತಿವೆ.
ಅಮೂಲ್ಯ ಅವರು ಮೊದಲಿನಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಪ್ರೆಗ್ನೆಂಟ್ ಆಗಿದ್ದ ಸಂದರ್ಭದ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಮಗು ಜನಿಸಿದ ನಂತರ ಅವರು ಸಾಮಾಜಿಕ ಜಾಲತಾಣದಿಂದ ಒಂದು ಬ್ರೇಕ್ ತೆಗೆದುಕೊಂಡಿದ್ದರು.
ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಹೊಸಹೊಸ ಫೋಟೋಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಈಗ ಅವರು ಮಗುವಿನ ಫೋಟೋ ತೋರಿಸಿದ್ದಾರೆ.
ಅಮೂಲ್ಯ ಅವರು ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಜಿಮ್ ಹಾಗೂ ಯೋಗ ಮಾಡುತ್ತಾರೆ. ಮಗು ಜನಿಸಿದ ಕೆಲವೇ ತಿಂಗಳ ಬಳಿಕ ಅವರು ಫಿಟ್ ಆಗಿ ಕಾಣಿಸಿಕೊಂಡಿದ್ದರು. ಅಮೂಲ್ಯ ಫೋಟೋ ನೋಡಿ ಅವರ ಫ್ಯಾನ್ಸ್ ಅಚ್ಚರಿ ಹೊರಹಾಕಿದ್ದರು.
ಅಮೂಲ್ಯ ಅವರು ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ಇನ್ನು ಕೆಲ ವರ್ಷ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಲಿದ್ದಾರೆ.