ನಿರೂಪಕಿ ಅನುಶ್ರೀ ಮದುವೆ: ಇಲ್ಲಿದೆ ಹಳದಿ ಶಾಸ್ತ್ರದ ಫೋಟೋಗಳು
ಆ್ಯಂಕರ್ ಅನುಶ್ರೀ ಅವರಿಗೆ ಇರುವ ಜನಪ್ರಿಯತೆ ಅಪಾರ. ಕಿರಿತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ತುಂಬ ಸ್ನೇಹಿತರಿದ್ದಾರೆ. ಆಪ್ತರು ಅನುಶ್ರೀ ಮದುವೆಗೆ ಹಾಜರಿ ಹಾಕಲಿದ್ದಾರೆ. ಈಗ ಮದುವೆ ಶಾಸ್ತ್ರಗಳು ಶುರುವಾಗಿದ್ದು, ಹಳದಿ ಶಾಸ್ತ್ರದಲ್ಲಿ ಅನುಶ್ರೀ ಮತ್ತು ರೋಷನ್ ಅವರು ಭಾಗಿಯಾಗಿದ್ದಾರೆ. ಫೋಟೋಗಳು ಇಲ್ಲಿವೆ.
Updated on: Aug 27, 2025 | 11:17 PM
Share

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರು ಹಸೆಮಣೆ ಏರುತ್ತಿದ್ದಾರೆ. ರೋಷನ್ ಜೊತೆ ಅವರ ವಿವಾಹ ನಡೆಯುತ್ತಿದೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ.

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ.

ಆಗಸ್ಟ್ 28ರ ಗುರುವಾರ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.

ಅನುಶ್ರೀ ಮದುವೆ ಯಾವಾಗ ಎಂಬ ಪ್ರಶ್ನೆ ಇತ್ತೀಚಿನ ವರ್ಷಗಳಲ್ಲಿ ಆಗಾಗ ಕೇಳಿಬರುತ್ತಲೇ ಇತ್ತು. ಅಂತೂ ಇಂತೂ ಅವರು ಈಗ ರೋಷನ್ ಜೊತೆ ವೈವಾಹಿಕ ಜೀವನ ಆರಂಭಿಸುತ್ತಿದ್ದಾರೆ.

ನಿರೂಪಣೆ ಮಾತ್ರವಲ್ಲದೇ ನಟಿಯಾಗಿಯೂ ಅನುಶ್ರೀ ಕೆಲಸ ಮಾಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಬಹಳ ಬೇಡಿಕೆ ಇದೆ. ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.
Related Photo Gallery
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ




