ನಿರೂಪಕಿ ಅನುಶ್ರೀ ಮದುವೆ: ಇಲ್ಲಿದೆ ಹಳದಿ ಶಾಸ್ತ್ರದ ಫೋಟೋಗಳು

Updated on: Aug 27, 2025 | 11:17 PM

ಆ್ಯಂಕರ್ ಅನುಶ್ರೀ ಅವರಿಗೆ ಇರುವ ಜನಪ್ರಿಯತೆ ಅಪಾರ. ಕಿರಿತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ತುಂಬ ಸ್ನೇಹಿತರಿದ್ದಾರೆ. ಆಪ್ತರು ಅನುಶ್ರೀ ಮದುವೆಗೆ ಹಾಜರಿ ಹಾಕಲಿದ್ದಾರೆ. ಈಗ ಮದುವೆ ಶಾಸ್ತ್ರಗಳು ಶುರುವಾಗಿದ್ದು, ಹಳದಿ ಶಾಸ್ತ್ರದಲ್ಲಿ ಅನುಶ್ರೀ ಮತ್ತು ರೋಷನ್ ಅವರು ಭಾಗಿಯಾಗಿದ್ದಾರೆ. ಫೋಟೋಗಳು ಇಲ್ಲಿವೆ.

1 / 5
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಅವರು ಹಸೆಮಣೆ ಏರುತ್ತಿದ್ದಾರೆ. ರೋಷನ್ ಜೊತೆ ಅವರ ವಿವಾಹ ನಡೆಯುತ್ತಿದೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ.

2 / 5
ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಆ್ಯಂಕರ್ ಅನುಶ್ರೀ ಮತ್ತು ರೋಷನ್ ಅವರ ಹಳದಿ ಶಾಸ್ತ್ರ ಬಹಳ ಅದ್ದೂರಿಯಾಗಿ ನಡೆದಿದೆ. ಹಳದಿ ಶಾಸ್ತ್ರದ ಫೋಟೋಗಳು ಕೂಡ ಲಭ್ಯವಾಗಿವೆ.

3 / 5
ಆಗಸ್ಟ್ 28ರ ಗುರುವಾರ ನಿರೂಪಕಿ ಅನುಶ್ರೀ ಅವರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್​​​ನಲ್ಲಿ ನಡೆಯಲಿದೆ. ಈ ವಿವಾಹಕ್ಕೆ ಅನೇಕ ಗಣ್ಯರು ಸಾಕ್ಷಿ ಆಗಲಿದ್ದಾರೆ.

4 / 5
ಅನುಶ್ರೀ ಮದುವೆ ಯಾವಾಗ ಎಂಬ ಪ್ರಶ್ನೆ ಇತ್ತೀಚಿನ ವರ್ಷಗಳಲ್ಲಿ ಆಗಾಗ ಕೇಳಿಬರುತ್ತಲೇ ಇತ್ತು. ಅಂತೂ ಇಂತೂ ಅವರು ಈಗ ರೋಷನ್ ಜೊತೆ ವೈವಾಹಿಕ ಜೀವನ ಆರಂಭಿಸುತ್ತಿದ್ದಾರೆ.

5 / 5
ನಿರೂಪಣೆ ಮಾತ್ರವಲ್ಲದೇ ನಟಿಯಾಗಿಯೂ ಅನುಶ್ರೀ ಕೆಲಸ ಮಾಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಬಹಳ ಬೇಡಿಕೆ ಇದೆ. ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.