Anchor Anushree: ಆ್ಯಂಕರ್ ಅನುಶ್ರೀ ನೀಡಿದ ಬಿಟ್ಟ ಸ್ಥಳ ತುಂಬಲು ನಿಮ್ಮಿಂದ ಸಾಧ್ಯವೇ?
ಮನಃಪೂರ್ತಿಯಾಗಿ ನಗುತ್ತಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಅನುಶ್ರೀ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ. ಅಲ್ಲದೆ, ಬಿಟ್ಟ ಸ್ಥಳ ತುಂಬುವಂತೆ ಕೋರಿದ್ದಾರೆ.
Updated on:Apr 14, 2023 | 6:33 AM

ನಟಿ ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಮನಃಪೂರ್ತಿಯಾಗಿ ನಗುತ್ತಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಅನುಶ್ರೀ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ. ಅಲ್ಲದೆ, ಬಿಟ್ಟ ಸ್ಥಳ ತುಂಬುವಂತೆ ಕೋರಿದ್ದಾರೆ.

‘ಸೋಲು ಕನಸಲ್ಲಿ ಇರಲಿ. ಗೆಲುವು ಮನಸಲ್ಲಿ ಇರಲಿ. _____ ಜೀವನದಲ್ಲಿ ಸದಾ ಇರಲಿ’ ಎಂದು ಬರೆದುಕೊಂಡಿದ್ದಾರೆ ಅನುಶ್ರೀ. ಬಿಟ್ಟ ಸ್ಥಳದಲ್ಲಿ ‘ನಗು’ ಎನ್ನುವ ಉತ್ತರವನ್ನು ಕೊಟ್ಟಿದ್ದಾರೆ ಫ್ಯಾನ್ಸ್.

ಆ್ಯಂಕರ್ ಅನುಶ್ರೀ ಅವರು ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಕಿರುತೆರೆ ಲೋಕದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ.

ಅನುಶ್ರೀ ಅವರನ್ನು ಇನ್ಸ್ಟಾಗ್ರಾಮ್ನಲ್ಲಿ 20 ಲಕ್ಷ ಹಿಂಬಾಲಕರಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.
Published On - 6:30 am, Fri, 14 April 23

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



