Updated on: Aug 21, 2023 | 1:16 PM
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಶೇರ್ ಮಾಡಿಕೊಂಡಿರುವ ಹೊಸ ಫೋಟೋಗಳು ಕ್ಯೂಟ್ ಆಗಿವೆ.
ರಶ್ಮಿಕಾ ಮಂದಣ್ಣ ಅವರು ಸೆಲ್ಫಿ ಪ್ರಿಯೆ. ಅವರು ಆಗಾಗ ಸೆಲ್ಫಿಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಸೆಲ್ಫಿಗಳು ಗಮನ ಸೆಳೆದಿವೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಈ ಫೋಟೋ ನೋಡಿದವರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
‘ನೀವು ತುಂಬಾನೇ ಸುಂದರವಾಗಿದ್ದೀರಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ನಿಮ್ಮ ಸ್ಮೈಲ್ ನಮಗೆ ಸಾಕಷ್ಟು ಇಷ್ಟವಾಯಿತು’ ಎಂದು ಹೇಳಿಕೊಂದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.
ರಶ್ಮಿಕಾ ಮಂದಣ್ಣ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಪುಷ್ಪ 2’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಇದರ ಜೊತೆಗೆ ‘ಅನಿಮಲ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.
ರಶ್ಮಿಕಾ ಮಂದಣ್ಣ ಅವರು ತಮಿಳು ಚಿತ್ರರಂಗದಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ‘ವಾರಿಸು’ ಚಿತ್ರದಲ್ಲಿ ಅವರು ನಟಿಸಿ ಫೇಮಸ್ ಆದರು. ಈ ಚಿತ್ರ ಈ ವರ್ಷದ ಆರಂಭದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು.
ಸದ್ಯ ಧನುಶ್ ನಟನೆಯ ಹೊಸ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ. ಈ ಬಗ್ಗೆ ಚಿತ್ರತಂಡ ಇತ್ತೀಚೆಗೆ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಕನ್ನಡ ಚಿತ್ರರಂಗದಿಂದ ಆರಂಭವಾದ ಅವರ ಜರ್ನಿ ಈಗ ಸಾಕಷ್ಟು ದೂರ ಸಾಗಿದೆ.