ಲಿಪ್ ಕಿಸ್ ಮಾಡಿ ಗಮನ ಸೆಳೆದ ನಟಿ ಅನುಪಮಾ ಪರಮೇಶ್ವರನ್; ಇಲ್ಲಿದೆ ಫೋಟೋಸ್
‘ಡಿಜೆ ಟಿಲ್ಲು’ ಚಿತ್ರದ ಸೀಕ್ವೆಲ್ ‘ಟಿಲ್ಲು ಸ್ಕ್ವೇರ್’. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿದ್ದು ಜೊನ್ನಲಗಡ್ಡ ಅವರು ‘ಟಿಲ್ಲು ಸ್ಕ್ವೇರ್’ ಚಿತ್ರಕ್ಕೆ ಹೀರೋ. ಇವರ ಜೊತೆ ಅನುಪಮಾ ಬೋಲ್ಡ್ ಆಗಿ ಕಾಣಿಸಿದ್ದಾರೆ. ಈ ಟ್ರೇಲರ್ ಗಮನ ಸೆಳೆದಿದೆ.
Updated on: Feb 15, 2024 | 10:51 AM

ನಟಿ ಅನುಪಮಾ ಪರಮೇಶ್ವರನ್ ಅವರು ತೆರೆಮೇಲೆ ಕಿಸ್ ಮಾಡುವ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆ. ಇದೇ ಮೊದಲ ಬಾರಿಗೆ ಅವರು ಆ ರೀತಿಯ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ನಟನೆಯ ‘ಟಿಲ್ಲು ಸ್ಕ್ವೇರ್’ ಸಿನಿಮಾ ಟ್ರೇಲರ್ ಗಮನ ಸೆಳೆದಿದೆ.

‘ಡಿಜೆ ಟಿಲ್ಲು’ ಚಿತ್ರದ ಸೀಕ್ವೆಲ್ ‘ಟಿಲ್ಲು ಸ್ಕ್ವೇರ್’. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿದ್ದು ಜೊನ್ನಲಗಡ್ಡ ಅವರು ‘ಟಿಲ್ಲು ಸ್ಕ್ವೇರ್’ ಚಿತ್ರಕ್ಕೆ ಹೀರೋ. ಇವರ ಜೊತೆ ಅನುಪಮಾ ಬೋಲ್ಡ್ ಆಗಿ ಕಾಣಿಸಿದ್ದಾರೆ.

2015ರಲ್ಲಿ ಅನುಪಮಾ ಚಿತ್ರರಂಗಕ್ಕೆ ಕಾಲಿಟ್ಟರು. ‘ಪ್ರೇಮಂ’ ಅವರ ಮೊದಲ ಚಿತ್ರ. ಈ ಚಿತ್ರ ಸೂಪರ್ ಹಿಟ್ ಆಯಿತು. ಆ ಬಳಿಕ ಅನುಪಮಾ ಖ್ಯಾತಿ ಹೆಚ್ಚಿತು. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ.

ಅನುಪಮಾ ಅವರು ಪಕ್ಕದ ಮನೆ ಹುಡುಗಿ ರೀತಿಯ ಪಾತ್ರಗ ಮೂಲಕ ಹೆಚ್ಚು ಗಮನ ಸೆಳೆದರು. ಇತ್ತೀಚೆಗೆ ಅವರು ಬೋಲ್ಡ್ ಅವತಾರ ತಾಳುತ್ತಿದ್ದಾರೆ. ಈ ಮೂಲಕ ಅವರು ಪ್ರೇಕ್ಷಕರಿಗೆ ಇಷ್ಟ ಆಗುತ್ತಿದ್ದಾರೆ.

ಈ ಮೊದಲು ಅನುಪಮಾ ಪರಮೇಶ್ವರನ್ ಅವರು ‘ರೌಡಿ ಬಾಯ್ಸ್’ ಚಿತ್ರದಲ್ಲಿ ಬೋಲ್ಡ್ ಪಾತ್ರ ಮಾಡಿಕೊಂಡಿದ್ದರು. ಆ ಬಳಿಕ ಈಗ ಮತ್ತದೇ ಹಾಟ್ ಅವತಾರ ತಾಳಿದ್ದಾರೆ.

ಮಾರ್ಚ್ 29ರಂದು ‘ಟಿಲ್ಲು ಸ್ಕ್ವೇರ್’ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರದಲ್ಲಿ ಅನುಪಮಾ ಲಿಪ್ ಲಾಕ್ ದೃಶ್ಯಗಳ ಮೂಲಕ ಗಮನ ಸೆಳೆದಿದ್ದಾರೆ. ಈ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಅವರು ಇಷ್ಟವಾಗಲಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More



